ಜೆಎನ್ ಯು ದಾಳಿ: ಮುಸುಕುದಾರಿ ಮಹಿಳೆಯನ್ನು ಗುರುತಿಸಿದ ಪೊಲೀಸರು

ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಕಳೆದ ವಾರ ನಡೆದ ಹಿಂಸಾಚಾರದ ವಿಡಿಯೋದಲ್ಲಿದ್ದ  ಮುಸುಕುದಾರಿ ಮಹಿಳೆಯನ್ನು ವಿಶೇಷ ತನಿಖಾ ತಂಡವೊಂದು ಗುರುತಿಸಿದೆ. ವಿಚಾರಣೆ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಆಕೆಗೆ ನೋಟಿಸ್ ಕಳುಹಿಸಲಾಗುವುದು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಜೆಎನ್ ಯು ದಾಳಿಯ ಮುಸುಕುದಾರಿಗಳು
ಜೆಎನ್ ಯು ದಾಳಿಯ ಮುಸುಕುದಾರಿಗಳು

ನವದೆಹಲಿ: ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಕಳೆದ ವಾರ ನಡೆದ ಹಿಂಸಾಚಾರದ ವಿಡಿಯೋದಲ್ಲಿದ್ದ  ಮುಸುಕುದಾರಿ ಮಹಿಳೆಯನ್ನು ವಿಶೇಷ ತನಿಖಾ ತಂಡವೊಂದು ಗುರುತಿಸಿದೆ. ವಿಚಾರಣೆ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಆಕೆಗೆ ನೋಟಿಸ್ ಕಳುಹಿಸಲಾಗುವುದು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಜನವರಿ 5 ರಂದು ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಏಳಕ್ಕೂ ಹೆಚ್ಚು ಮಂದಿಯನ್ನು ಎಸ್ ಐಟಿ ಗುರುತಿಸಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಇದಕ್ಕೂ ಮುಂಚೆ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಶ್ ಘೋಷ್ ಸೇರಿದಂತೆ 9 ಮಂದಿ ಶಂಕಿತರ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿತ್ತು. 

ಜನವರಿ 5 ರಂದು ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಆವರಣದಲ್ಲಿನ ಸಬರಮತಿ ಹಾಸ್ಟೆಲ್ ಗೆ ನುಗಿದ್ದ ಮುಸುಕುದಾರಿ ದುಷ್ಕರ್ಮಿಗಳು, ಹಾಸ್ಟೆಲ್   ಧ್ವಂಸ ಮಾಡಿ  ಸುಮಾರು 30 ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com