ಸಿಎಎಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದೇಕೆ; ಮಾಯಾವತಿ ಪ್ರಶ್ನೆ
ದೇಶದ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡುವಾಗಿ ಪೌರತ್ವ ತಿದ್ದುಪಡಿ ಕಾಯ್ದೆಯಿಂದ (ಸಿಎಎ) ಮುಸ್ಲಿಮರನ್ನು ಕೈಬಿಟ್ಟಿರುವುದೇಕೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ ಪ್ರಶ್ನಿಸಿದ್ದಾರೆ.
Published: 15th January 2020 04:56 PM | Last Updated: 15th January 2020 04:56 PM | A+A A-

ಸಿಎಎಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದೇಕೆ; ಮಾಯಾವತಿ ಪ್ರಶ್ನೆ
ಲಖನೌ: ದೇಶದ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡುವಾಗಿ ಪೌರತ್ವ ತಿದ್ದುಪಡಿ ಕಾಯ್ದೆಯಿಂದ (ಸಿಎಎ) ಮುಸ್ಲಿಮರನ್ನು ಕೈಬಿಟ್ಟಿರುವುದೇಕೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ ಪ್ರಶ್ನಿಸಿದ್ದಾರೆ.
ಒಂದು ನಿರ್ದಿಷ್ಟ ಸಮುದಾಯವನ್ನು ಕಾನೂನಿನ ವ್ಯಾಪ್ತಿಯಿಂದ ಹೊರಗಿಟ್ಟಿರುವ ಸಿಎಎ ಅಸಂವಿಧಾನಿಕವಾಗಿದ್ದು, ಅದನ್ನು ಹಿಂಪಡೆಯಬೇಕು ಎಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮನವಿ ಮಾಡಿದರು.
ದೇಶದ ವಿಭಜನೆಯ ನಂತರ ಪಾಕಿಸ್ತಾನಕ್ಕೆ ತೆರಳಿದ ಮುಸ್ಲಿಮರು ಹೇಗೆ ದೌರ್ಜನ್ಯಕ್ಕೊಳಗಾಗಿದ್ದಾರೆ ಎಂಬುದು ಪ್ರತಿಯೊಬ್ಬರಿಗೂ ತಿಳಿದಿದೆ. ಅವರಿಗೆ ಇತರ ಜನರಂತೆಯೇ ಭಾರತಕ್ಕೆ ಮರಳಲು ಅವಕಾಶ ಕಲ್ಪಿಸಬಾರದೆ ಎಂದು ಅವರು ಪ್ರಶ್ನಿಸಿದ್ದಾರೆ.