ನಿರ್ಭಯಾ 'ಹತ್ಯಾಚಾರ' ಪ್ರಕರಣ: ಆರೋಪಿ ಮುಕೇಶ್ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ದೆಹಲಿ ಸರ್ಕಾರ

ನಿರ್ಭಯಾ ಸಾಮೂಹಿಕ ಹತ್ಯಾಚಾರ ಪ್ರಕರಣದಲ್ಲಿ ಗಲ್ಲುಶಿಕ್ಷಗೆ ಗುರಿಯಾಗಿರುವ ಮುಕೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ದೆಹಲಿ ಸರ್ಕಾರ ಗುರುವಾರ ತಿರಸ್ಕರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ನಿರ್ಭಯಾ ಸಾಮೂಹಿಕ ಹತ್ಯಾಚಾರ ಪ್ರಕರಣದಲ್ಲಿ ಗಲ್ಲುಶಿಕ್ಷಗೆ ಗುರಿಯಾಗಿರುವ ಮುಕೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ದೆಹಲಿ ಸರ್ಕಾರ ಗುರುವಾರ ತಿರಸ್ಕರಿಸಿದೆ. 

ತಿರಸ್ಕೃತ ಅರ್ಜಿಯನ್ನು ದೆಹಲಿಯ ಲೆಫ್ಟಿನಂಟ್ ಗವರ್ನರ್ ಕಚೇರಿಗೆ ಸರ್ಕಾರ ಕಳುಹಿಸಿದ್ದು, ಬಳಿಕ ಅಲ್ಲಿಂದ ಕೇಂದ್ರ ಗೃಹ ಸಚಿವಾಲಯಕ್ಕೆ ರವಾಸಲಾಗಿದೆ ಎಂದು ವರದಿಗಳು ತಿಳಿಸಿದೆ. 

ನೇಣುಗಂಬಕ್ಕೇರಲು ದಿನಗಲನ್ನು ಎಣಿಸುತ್ತಿರುವ ದೆಹಲಿ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಅಮಾನುಷ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳು ಗಲ್ಲು ಶಿಕ್ಷೆಯನ್ನು ಮುಂದೂಡಲು ಇಲ್ಲವೇ ತಪ್ಪಿಸಿಕೊಳ್ಳಲು ತಮ್ಮ ಶತಪ್ರಯತ್ನ ಮುಂದುವರೆಸಿದ್ದಾರೆ. ಡೆತ್ ವಾರಂಟ್ ರದ್ದುಪಡಿಸಬೇಕೆಂದು ಕೋರಿ ಮುಕೇಶ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಅದರ ಬೆನ್ನಲ್ಲೇ ಮುಕೇಶ್ ದೆಹಲಿ ಸೆಷನ್ಸ್ ಕೋರ್ಟ್ ನಲ್ಲಿ ವಾರಂಟ್ ರದ್ದು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿದ್ದರು. 

ಅಪರಾಧಿಯೊಬ್ಬ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಈ ಹಿಂದೆ ಘೋಷಿಸಿದ್ದಂತ ಜ.22 ರಂದು ಮರಣದಂಡನೆ ಜಾರಿ ಮಾಡಲು ಸಾಧ್ಯವಿಲೇ್ಲ ಎಂದು ದೆಹಲಿ ಸರ್ಕಾರ ಬುಧವಾರ ಸ್ಪಷ್ಟಪಡಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com