370ನೇ ವಿಧಿ ರದ್ದು: ಲಾಭ ವಿವರಿಸಲು 36 ಕೇಂದ್ರ ಸಚಿವರು ಕಾಶ್ಮೀರಕ್ಕೆ ಭೇಟಿ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ 6 ತಿಂಗಳ ಬಳಿಕ ಇದೀಗ 370ನೇ ರದ್ದತಿಯಿಂದಾಗಿ ರಾಜ್ಯದ ಜನತೆಗೆ ಏನೆಲ್ಲಾ ಅನುಕೂಲವಾಗುತ್ತದೆ ಎಂಬುದರ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರದ 36 ಸಚಿವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ, 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ 6 ತಿಂಗಳ ಬಳಿಕ ಇದೀಗ 370ನೇ ರದ್ದತಿಯಿಂದಾಗಿ ರಾಜ್ಯದ ಜನತೆಗೆ ಏನೆಲ್ಲಾ ಅನುಕೂಲವಾಗುತ್ತದೆ ಎಂಬುದರ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರದ 36 ಸಚಿವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ, 

ಜ.18 ರಿಂದ ಜ.24ರವರೆಗೂ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶದ ಸೂಕ್ಷ್ಮ ಸ್ಥಳಗಳಿಗೆ ಭೇಟಿ ಕೇಂದ್ರ ಸಚಿವರು ಭೇಟಿ ನೀಡಲಿದ್ದಾರೆ. 

ಭೇಟಿ ವೇಳೆ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು, 370ನೇ ವಿಧಿ ರದ್ಧತಿಯಿಂದ ಆ ಭಾಗದಲ್ಲಿ ನಿರ್ಮಾಣವಾದ ಧನಾತ್ಮಕ ಅಂಶಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಿದ್ದಾರೆಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com