ದೆಹಲಿ ಚುನಾವಣೆ: ಬಿಜೆಪಿಯ 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಫೆಬ್ರವರಿ 8ರಂದು ನಡೆಯುವ ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಹಾಲಿ ಶಾಸಕ ವಿಜೇಂದರ್ ಗುಪ್ತಾ, ಮಾಜಿ ಮೇಯರ್ ಗಳಾದ ರವೀಂದರ್ ಗುಪ್ತಾ ಹಾಗೂ ಯೋಗೇಂದರ್ ಚಾಂಡೋಲಿಯಾ ಅವರಿಗೆ ಟಿಕೆಟ್ ನೀಡಲಾಗಿದೆ.
ಮನೋಜ್ ತಿವಾರಿ
ಮನೋಜ್ ತಿವಾರಿ

ನವದೆಹಲಿ: ಫೆಬ್ರವರಿ 8ರಂದು ನಡೆಯುವ ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಹಾಲಿ ಶಾಸಕ ವಿಜೇಂದರ್ ಗುಪ್ತಾ, ಮಾಜಿ ಮೇಯರ್ ಗಳಾದ ರವೀಂದರ್ ಗುಪ್ತಾ ಹಾಗೂ ಯೋಗೇಂದರ್ ಚಾಂಡೋಲಿಯಾ ಅವರಿಗೆ ಟಿಕೆಟ್ ನೀಡಲಾಗಿದೆ.

ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಅವರು ಇಂದು 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಎಎಪಿ ಮಾಜಿ ಶಾಸಕ ಕಪಿಲ್ ಮಿಶ್ರಾ, 11 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಹಾಗೂ ನಾಲ್ವರು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.

ಈ ಮಧ್ಯೆ, ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿಲ್ಲ. ಆದರೆ ಶೀಘ್ರದಲ್ಲೇ ಅಭ್ಯರ್ಥಿ ಘೋಷಿಸುವುದಾಗಿ ಮನೋಜ್ ತಿವಾರಿ ಹೇಳಿದ್ದಾರೆ.

ದೆಹಲಿ ವಿಧಾನಸಭೆ 70 ಸದಸ್ಯ ಬಲ ಹೊಂದಿದ್ದು, ಆಡಳಿತರೂಢ ಆಮ್ ಆದ್ಮಿ ಪಕ್ಷ ಎಲ್ಲಾ 70 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com