ಎನ್ ಪಿಆರ್ ಪ್ರಕ್ರಿಯೆ ಆರಂಭಿಸದಂತೆ ಜಿಲ್ಲಾಧಿಕಾರಿಗಳಿಗೆ ಕೇರಳ ಸರ್ಕಾರ ಸೂಚನೆ

ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್ ಪಿಆರ್) ಪ್ರಕ್ರಿಯೆ ಆರಂಭಿಸದಂತೆ ಕೇರಳ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಒಂದು ವೇಳೆ ಸರ್ಕಾರದ ಆದೇಶ....
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ತಿರುವನಂತಪುರಂ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್ ಪಿಆರ್) ಪ್ರಕ್ರಿಯೆ ಆರಂಭಿಸದಂತೆ ಕೇರಳ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಒಂದು ವೇಳೆ ಸರ್ಕಾರದ ಆದೇಶ ಉಲ್ಲಂಘಿಸಿದರೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಪ್ರಧಾನ ಕಾರ್ಯದರ್ಶಿ(ಸಾಮಾನ್ಯ ಆಡಳಿತ) ಕೆಆರ್ ಜ್ಯೋತಿಲಾಲ್ ಅವರು, ನಿಮಗೆ ತಿಳಿದಿರುವಂತೆ ರಾಜ್ಯ ಸರ್ಕಾರ ಎನ್ ಪಿಆರ್ ಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳಿಗೆ ತಡೆ ನೀಡಿದ್ದು, ಜನಗಣತಿ ಕಾರ್ಯಾಚರಣೆ - 2021ರ ಮೊದಲ ಹಂತದ ಪ್ರಕ್ರಿಯೆ ಆರಂಭಿಸಬಾರದು. ಒಂದು ವೇಳೆ ಸರ್ಕಾರದ ಆದೇಶ ಪಾಲಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ನಿಮ್ಮ ಜಿಲ್ಲೆಯಲ್ಲಿ ಜನಗಣತಿಗೆ ಸಂಬಂಧಿಸಿದಂತೆ ಯಾವುದೇ ಪ್ರಕ್ರಿಯೆ ನಡೆಯದಂತೆ ಖಚಿತಪಡಿಸಿಕೊಳ್ಳಬೇಕು ಎಂದು ಜ್ಯೋತಿಲಾಲ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com