ನಿರ್ಭಯಾ ಪ್ರಕರಣ: ಅಪರಾಧಿಯ ಕ್ಷಮಾದಾನ ಅರ್ಜಿ ರಾಷ್ಟ್ರಪತಿಗಳಿಗೆ ರವಾನೆ

ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಕ್ಷಮಾದಾನ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದು ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸು ಮಾಡಿದೆ. 

Published: 17th January 2020 11:14 AM  |   Last Updated: 17th January 2020 11:14 AM   |  A+A-


ನಿರ್ಭಯಾ ಅಪರಾಧಿಗಳು

Posted By : Raghavendra Adiga
Source : PTI

ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಕ್ಷಮಾದಾನ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದು ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸು ಮಾಡಿದೆ. 2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರಿಗೆ ಮರಣ ದಂಡನೆ ಶಿಕ್ಷೆಯಾಗಿದ್ದು ಇದರಲ್ಲಿ ಒಬ್ಬನಾದ ಮುಖೇಶ್ ಸಿಂಗ್ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ.

"ಗೃಹ ಸಚಿವಾಲಯವು ಮುಖೇಶ್ ಸಿಂಗ್  ಕ್ಷಮಾದಾನ ಅರ್ಜಿಯನ್ನು ಷ್ಟ್ರಪತಿಗೆ ರವಾನಿಸಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶಿಫಾರಸನ್ನು ಸಚಿವಾಲಯಪುನರುಚ್ಚರಿಸಿದೆ" ಎಂದು ಅಧಿಕಾರಿಗಳು ಹೇಳಿದ್ದಾರೆ.

ದೆಹಲಿ ಸರ್ಕಾರ ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸು ಮಾಡಿದ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಮುಖೇಶ್ ಕ್ಷಮಾದಾನ ಅರ್ಜಿಯನ್ನು ಗುರುವಾರ ಗೃಹ ಸಚಿವಾಲಯಕ್ಕೆ ಕಳುಹಿಸಿದ್ದರು.ಮುಖೇಶ್ ಸಿಂಗ್ (32), ವಿನಯ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ಮತ್ತು ಪವನ್ ಗುಪ್ತಾ (25) ಎಂಬ ನಾಲ್ವರು ಆರೋಪಿಗಳನ್ನು ಜನವರಿ 22 ರಂದು ಬೆಳಿಗ್ಗೆ 7 ಗಂಟೆಗೆ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಬೇಕಿತ್ತು.

ದೆಹಲಿ ನ್ಯಾಯಾಲಯವು ಜನವರಿ 7 ರಂದು ಆರೋಪಿಗಳನ್ನು ಗಲ್ಲಿಗೇರಿಸಿ ಎಂದು ಡೆತ್ ವಾರಂಟ್ ಹೊರಡಿಸಿತ್ತು. ಆದರೆ, ಮುಖೇಶ್ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದರಿಂದ ಜನವರಿ 22 ರಂದು ಅಪರಾಧಿಗಳ ಮರಣದಂಡನೆ ನಡೆಯುವುದಿಲ್ಲ ಎಂದು ದೆಹಲಿ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು. 

Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp