ಉಗ್ರರ ಜೊತೆ ಸಂಪರ್ಕ ಆರೋಪದ ಮೇಲೆ ಡಿಎಸ್ಪಿ ದೇವಿಂದರ್ ಸಿಂಗ್ ಬಂಧನ: ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆ 

ಮೂವರು ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಬಂಧಿತರಾಗಿರುವ ಜಮ್ಮು-ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ವಿಚಾರಣೆ ನಡೆಸಲಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಡಿಎಸ್ಪಿ ದೇವಿಂದರ್ ಸಿಂಗ್
ಡಿಎಸ್ಪಿ ದೇವಿಂದರ್ ಸಿಂಗ್

ನವದೆಹಲಿ: ಮೂವರು ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಬಂಧಿತರಾಗಿರುವ ಜಮ್ಮು-ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ವಿಚಾರಣೆ ನಡೆಸಲಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.


ಡಿಎಸ್ಪಿಯಾಗಿ ನೇಮಕಗೊಂಡಿದ್ದ ದೇವಿಂದರ್ ಸಿಂಗ್ ಕಳೆದ ವಾರ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಸ್ವಘೋಷಿತ ಜಿಲ್ಲಾ ಕಮಾಂಡರ್ ನವೀದ್ ಬಾಬು, ಅಟಿಫ್ ಮತ್ತು ಅಡ್ವೊಕೇಟ್ ಇರ್ಫಾನ್ ಮಿರ್ ಜೊತೆ ಬಂಧಿತರಾಗಿದ್ದರು. ದಕ್ಷಿಣ ಕಾಶ್ಮೀರದ ಖ್ವಾಝಿಕುಂಡ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಾಲ್ವರನ್ನು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಹೊತ್ತೊಯ್ಯುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿತ್ತು.


ಕೇಂದ್ರ ಗೃಹ ಸಚಿವಾಲಯದಿಂದ ಆದೇಶ ಬಂದ ಹಿನ್ನಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಈ ಕೇಸಿನ ಮರು ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com