ಮುಂಬೈ-ಪುಣೆ ಹೆದ್ದಾರಿಯಲ್ಲಿ ರಸ್ತೆ ಅಪಘಾತ: ಬಾಲಿವುಡ್ ನಟಿ ಶಬಾನಾ ಆಜ್ಮಿಗೆ  ಗಾಯ

ಮಹಾರಾಷ್ಟ್ರದ ರಾಯ್ ಗಡ್ ಜಿಲ್ಲೆಯ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಿವುಡ್ ನಟಿ ಶಬಾನಾ ಆಜ್ಮಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ನಟಿ ಶಬಾನಾ ಆಜ್ಮಿ
ನಟಿ ಶಬಾನಾ ಆಜ್ಮಿ

ಮುಂಬೈ: ಮಹಾರಾಷ್ಟ್ರದ ರಾಯ್ ಗಡ್ ಜಿಲ್ಲೆಯ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಿವುಡ್ ನಟಿ ಶಬಾನಾ ಆಜ್ಮಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಮುಂಬೈಯಿಂದ 60 ಕಿಲೋ ಮೀಟರ್ ದೂರದಲ್ಲಿರುವ ಕಾಲಾಪುರ್ ಬಳಿ ಇಂದು ಮಧ್ಯಾಹ್ನ 3-30ರ ವೇಳೆಯಲ್ಲಿ ಶಬಾನಾ ಆಜ್ಮಿ ಪ್ರಯಾಣಿಸುತ್ತಿದ್ದ ಕಾರು ಟ್ರಕ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ರಾಯ್ ಗಡ್ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಪರಾಸ್ಕರ್ ತಿಳಿಸಿದ್ದಾರೆ.

ನವ ಮುಂಬೈಯ ಎಂಜಿಎಂ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com