24 ರಂದು ಭಾರತಕ್ಕೆ ಬ್ರೆಜಿಲ್ ಅಧ್ಯಕ್ಷರ ಭೇಟಿ

ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ ಇದೇ 24ರಂದು ಭಾರತಕ್ಕೆ ಆಗಮಿಸಲಿದ್ದಾರೆ.
ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ ಮತ್ತು ಪ್ರಧಾನಿ ಮೋದಿ
ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ ಮತ್ತು ಪ್ರಧಾನಿ ಮೋದಿ

ನವದೆಹಲಿ: ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ ಇದೇ 24ರಂದು ಭಾರತಕ್ಕೆ ಆಗಮಿಸಲಿದ್ದಾರೆ.

ಶುಕ್ರವಾರದಿಂದ ನಾಲ್ಕು ದಿನಗಳ ದೇಶ ಪ್ರವಾಸ ಪ್ರಾರಂಭವಾಗಲಿದೆ ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮೊದಲ ಭಾರತ ಭೇಟಿಯಾಗಿದೆ. ಬೋಲ್ಸನಾರೊ ಅವರೊಂದಿಗೆ 7 ಮಂತ್ರಿಗಳು ಉನ್ನತ ಅಧಿಕಾರಿಗಳು ಮತ್ತು ದೊಡ್ಡ ವಾಣಿಜ್ಯ ನಿಯೋಗವೂ ಆಗಮಿಸಲಿದೆ.

ಭಾರತವು ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಅನ್ಯರಾಷ್ಟ್ರಗಳ ನಾಯಕರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನ ನೀಡುವುದು ವಾಡಿಕೆ. ಅದರಂತೆ ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ 71ನೇ ಗಣರಾಜ್ಯೋತ್ಸದ ಮುಖ್ಯ ಅತಿಥಿಯಾಗಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಪಾಲ್ಗೊಳ್ಳುತ್ತಿದ್ದಾರೆ.

ಬ್ರೆಜಿಲ್‌ನ ಮಾಜಿ ಅಧ್ಯಕ್ಷರಾದ ಫರ್ನಾಂಡೊ ಹೆನ್ರಿಕ್ ಕಾರ್ಡೋಸೊ ಮತ್ತು ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಕ್ರಮವಾಗಿ 1996 ಮತ್ತು 2004ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಬಳಿಕ ಜೈರ್ ಬೋಲ್ಸನಾರೊ ಭಾರತಕ್ಕೆ ಭೇಟಿ ನೀಡುತ್ತಿರುವ ಬ್ರೆಜಿಲ್‌ನ ಮೂರನೇ ಅಧ್ಯಕ್ಷರಾಗಿದ್ದಾರೆ.

ವಸಾಹತುಶಾಹಿ ಆಳ್ವಿಕೆಯಲ್ಲಿದ್ದಾಗಿನಿಂದಲೂ ಭಾರತ ಮತ್ತು ಬ್ರೆಜಿಲ್ ಸಂಬಂಧ ಉತ್ತಮವಾಗಿತ್ತು. ಇಂದು ಕೂಡ ಪ್ರಮುಖ ದ್ವಿಪಕ್ಷೀಯ ಸಂಬಂಧಗಳನ್ನು ಹೊಂದಿವೆ. ಉಭಯ ರಾಷ್ಟ್ರಗಳು ಕೂಡ ಬ್ರಿಕ್ಸ್, ಬಿಎಎಸ್‌ಐಸಿ, ಜಿ -20, ಜಿ -4, ಐಬಿಎಸ್ಎ, ಅಂತರರಾಷ್ಟ್ರೀಯ ಸೌರ ಒಕ್ಕೂಟ ಮತ್ತು ಬಯೋಫ್ಯೂಚರ್‌ಗಳಂತಹ ಅನೇಕ ವೇದಿಕೆಗಳಲ್ಲಿ ಸದಸ್ಯ ರಾಷ್ಟ್ರಗಳಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com