ಪ್ರಧಾನಿ ಮೋದಿ 'ನೌಕರಿ ಪರ್ ಚರ್ಚಾ' ಮಾಡಬೇಕು- ಯೆಚೂರಿ

ಉದ್ಯೋಗದ ಪ್ರಮಾಣ ಕ್ಷೀಣಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಮೋದಿ ನೌಕರಿ ಪರ್ ಚರ್ಚಾ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಉದ್ಯೋಗದ ಪ್ರಮಾಣ ಕ್ಷೀಣಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಮೋದಿ ನೌಕರಿ ಪರ್ ಚರ್ಚಾ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಸುದ್ದಿಸಂಸ್ಥೆಯೊಂದರ ವರದಿ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಯೆಚೂರಿ, ಸ್ವಾತಂತ್ರ್ಯ ನಂತರ ದೇಶದಲ್ಲಿ ನಿರುದ್ಯೋಗ ಪ್ರಮಾಣ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ ಎಂದು ಆರೋಪಿಸಿದರು.

ನೋಟ್ ಅಮಾನ್ಯೀಕರಣ, ಜಿಎಸ್ ಟಿಯಂತಹ ಕೆಟ್ಟ ಯೋಜನೆಗಳನ್ನು ಜಾರಿಗೆ ತಂದಿರುವ ಪ್ರಧಾನಿ ನರೇಂದ್ರ ಮೋದಿ, 
 ನೌಕರಿ ಫರ್ ಚರ್ಚೆ ನಡೆಸಿ ಉದ್ಯೋಗ ಇಲ್ಲದಿರುವ ಕೋಟ್ಯಾಂತರ ಮಂದಿ ಸಂಕಷ್ಟ ಕೇಳಬೇಕು ಎಂದು ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿದೆ. 15-19 ವರ್ಷ ನಡುವಿನ ಶೇ. 45 ರಷ್ಟು ಮಂದಿ, 20 ಹಾಗೂ 24 ವರ್ಷದೊಳಗಿನ ಶೇ. 37 ರಷ್ಟು ನಿರುದ್ಯೋಗಿಗಳಿದ್ದು, ನಗರ ಪ್ರದೇಶದಲ್ಲಿ ನಿರುದ್ಯೋಗ ಶೇ. 44ರಷ್ಟಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com