ರಾಷ್ಟ್ರಪತಿಗಳಿಂದ ಪ್ರಧಾನಿ ರಾಷ್ಟ್ರೀಯ ಬಾಲ ಪುರಸ್ಕಾರ ಸ್ವೀಕರಿಸಿದ ಬೆಂಗಳೂರಿನ ಯಶ್ ಆರಾಧ್ಯ!

ಬೆಂಗಳೂರಿನ ಯಶ್ ಆರಾಧ್ಯ ಪ್ರತಿಷ್ಠಿತ ಪ್ರಧಾ ನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ಮೋಟಾರ್ ಸ್ಪೋರ್ಟ್ಸ್ ಪಟು ಎನ್ನುವ ಹಿರಿಮೆಗೆ ಗುರುವಾರ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಯಶ್ ಪ್ರಶಸ್ತಿ ಸ್ವೀಕರಿಸಿದರು.
ಯಶ್ ಆರಾಧ್ಯ-ರಾಮನಾಥ್ ಕೋವಿಂದ್
ಯಶ್ ಆರಾಧ್ಯ-ರಾಮನಾಥ್ ಕೋವಿಂದ್

ದೆಹಲಿ: ಬೆಂಗಳೂರಿನ ಯಶ್ ಆರಾಧ್ಯ ಪ್ರತಿಷ್ಠಿತ ಪ್ರಧಾ ನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ಮೋಟಾರ್ ಸ್ಪೋರ್ಟ್ಸ್ ಪಟು ಎನ್ನುವ ಹಿರಿಮೆಗೆ ಗುರುವಾರ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಯಶ್ ಪ್ರಶಸ್ತಿ ಸ್ವೀಕರಿಸಿದರು.

9ನೇ ವಯಸ್ಸಿನಿಂದಲೇ ರೇಸಿಂಗ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯಶ್ ತಮ್ಮ ಸಾ ಧನೆಯ ಹಾದಿಯಲ್ಲಿ 13 ಚಾಂಪಿಯನ್ ಶಿಪ್ ಗಳನ್ನು ಗೆದ್ದಿದ್ದಾರೆ. 17 ವರ್ಷದ ರೇಸರ್ ಈ ವರೆಗೂ 65 ಬಾರಿ ಪೋಡಿಯಂ ಫಿನಿಶ್ ಮಾಡಿದ್ದು, 12 ಪ್ರಶಸ್ತಿಗಳನ್ನು ತಮ್ಮ ಹೆಸರಿಗೆ ಸೇರ್ಪಡೆಗೊಳಿಸಿಕೊಂಡಿದ್ದಾರೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ, 18 ವಯಸ್ಸಿನೊಳಗಿನ ಅಸಾಧಾರಣ ವಿದ್ಯಾರ್ಥಿಗಳು ವಿವಿಧ  ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೀಡುವ ಭಾರತದ ಅತ್ಯುನ್ನತ ಪ್ರಶಸ್ತಿಯಾಗಿದೆ. ಯಶ್ ಸೇರಿದಂತೆ 49 ಪ್ರತಿಭಾವಂತರನ್ನು ಈ ಪ್ರಶಸ್ತಿಗೆ, ಕೇಂದ್ರ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಆಯ್ಕೆ ಮಾಡಿತ್ತು. ಈ ಪ್ರತಿಭಾವಂತ ವಿದ್ಯಾರ್ಥಿಗಳು ಜನವರಿ 26ರಂದು ಗಣರಾಜ್ಯೋತ್ಸವದ ಪರೇಡ್ ಗೂ ಮುನ್ನ ಪ್ರಧಾನ ಮಂತ್ರಿಯವರನ್ನು ಸಹ ಭೇಟಿ ಮಾಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com