'ಕಾಶ್ಮೀರ ವಿಚಾರದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಅವಕಾಶವಿಲ್ಲ': ಟ್ರಂಪ್ 'ಸಹಾಯ' ಹೇಳಿಕೆಗೆ ಭಾರತ ತಿರುಗೇಟು

 ಕಾಶ್ಮೀರ ವಿಷಯದಲ್ಲಿ ಮೂರನೇ ವ್ಯಕ್ತಿ ಮಧ್ಯಸ್ಥಿಕೆ ಅಗತ್ಯವಿಲ್ಲ ಎಂದು ಭಾರತ ಪುನರುಚ್ಚರಿಸಿದೆ.  ಭಾರತ ಮತ್ತು ಪಾಕಿಸ್ತಾನ ನಡುವಿನ ಸುದೀರ್ಘ ಕಾಲದ ವಿವಾದವನ್ನು ಬಗೆಹರಿಸಲು  "ಸಹಾಯ" ಮಾಡುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ಪ್ರಸ್ತಾಪಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಪ್ರತಿಕ್ರಿಯೆ ನೀಡಿದೆ. 
'ಕಾಶ್ಮೀರ ವಿಚಾರದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಅವಕಾಶವಿಲ್ಲ': ಟ್ರಂಪ್ 'ಸಹಾಯ' ಹೇಳಿಕೆಗೆ ಭಾರತ ತಿರುಗೇಟು

ನವದೆಹಲಿ: ಕಾಶ್ಮೀರ ವಿಷಯದಲ್ಲಿ ಮೂರನೇ ವ್ಯಕ್ತಿ ಮಧ್ಯಸ್ಥಿಕೆ ಅಗತ್ಯವಿಲ್ಲ ಎಂದು ಭಾರತ ಪುನರುಚ್ಚರಿಸಿದೆ.  ಭಾರತ ಮತ್ತು ಪಾಕಿಸ್ತಾನ ನಡುವಿನ ಸುದೀರ್ಘ ಕಾಲದ ವಿವಾದವನ್ನು ಬಗೆಹರಿಸಲು  "ಸಹಾಯ" ಮಾಡುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ಪ್ರಸ್ತಾಪಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಪ್ರತಿಕ್ರಿಯೆ ನೀಡಿದೆ.

ಕಾಶ್ಮೀರವು ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ವಿಷಯವಾಗಿದೆ ಮತ್ತು ಯಾವುದೇ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಅಥವಾ ಹಸ್ತಕ್ಷೇಪದ ಪ್ರಶ್ನೆಯೇ ಇಲ್ಲ ಎಂದು ಭಾರತ ಪ್ರತಿಪಾದಿಸಿದೆ.

ಮಂಗಳವಾರ ದಾವೋಸ್‌ನಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಜತೆಗೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ಕಾಶ್ಮೀರಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಅಮೆರಿಕ ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ವಿವಾದವನ್ನು ಬಗೆಹರಿಸಲು "ಸಹಾಯ" ಮಾಡುವ ಪ್ರಸ್ತಾಪವನ್ನು ಮತ್ತೆ ಪರಾಮರ್ಶಿಸುತ್ತಿದೆ ಎಂದಿದ್ದರು.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಭಾರತ ಹಿಂತೆಗೆದುಕೊಂಡ ನಂತರ ಹಾಗೂ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ಬಳಿಕ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಉಭಯ ದೇಶಗಳಿಗೆ ಸಹಾಯ ಮಾಡುವ ಕುರಿತು ಟ್ರಂಪ್ ಇದು ನಾಲ್ಕನೇ ಬಾರಿ ಹೇಳಿಕೆ ನೀಡುತ್ತಿದ್ದಾರೆ. "ಪಾಕಿಸ್ತಾನ ಮತ್ತು ಭಾರತದ ನಡುವೆ ಏನು ನಡೆಯುತ್ತಿದೆ ... ನಮ್ಮಿಂದೇನಾದರೂ ಸಹಾಯ ಬೇಕಾದರೆ ನಾವು ಸಿದ್ದರಿದ್ದೇವೆ. ನಾವು ಅದನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ”ಎಂದು ಟ್ರಂಪ್ ಹೇಳಿದ್ದಾ

ಕಾಶ್ಮೀರ ವಿಚಾರದಲ್ಲಿ ಯಾವುದೇ ಮೂರನೇ ವ್ಯಕ್ತಿ ಪ್ರವೇಶಿಸುವ ಅಗತ್ಯವಿಲ್ಲಎಂಬುದು ಭಾರತದ ಸ್ಪಷ್ಟ ಮತ್ತು ಸ್ಥಿರ ನಿಲುವು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇನ್ನು ಫೆಬ್ರವರಿ ದ್ವಿತೀಯಾರ್ಧದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತಕ್ಕೆ ಆಗಮಿಸುವ ನಿರೀಕ್ಷೆ ಇದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com