'ಮನೆಯಲ್ಲಿ ಎಲ್ಲರೂ ರಾಮನನ್ನು ಪೂಜಿಸುತ್ತಾರೆ': ಠಾಕ್ರೆ ಅಯೋಧ್ಯೆ ಭೇಟಿಗೆ ಕಾಂಗ್ರೆಸ್, ಎನ್ ಸಿಪಿಗೆ ಸೇನಾ ಆಹ್ವಾನ

'ಮಹಾ ವಿಕಾಸ ಅಘಾದಿ' ಸರ್ಕಾರ ಮಾರ್ಚ್ ನಲ್ಲಿ 100 ದಿನ ಪೂರೈಸುತ್ತಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದು, ಅವರಿಗೆ ಸಾಥ್ ನೀಡುವಂತೆ ಕಾಂಗ್ರೆಸ್ ಹಾಗೂ ಎನ್ ಸಿಪಿ ಗೆ ಆಹ್ವಾನ ನೀಡಲಾಗುವುದು ಎಂದು ಶಿವಸೇನಾ ನಾಯಕ ಸಂಜಯ್ ರೌತ್ ಅವರು ಗುರುವಾರ ಹೇಳಿದ್ದಾರೆ.
ಸಂಜಯ್ ರೌತ್
ಸಂಜಯ್ ರೌತ್

ಮುಂಬೈ: 'ಮಹಾ ವಿಕಾಸ ಅಘಾದಿ' ಸರ್ಕಾರ ಮಾರ್ಚ್ ನಲ್ಲಿ 100 ದಿನ ಪೂರೈಸುತ್ತಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದು, ಅವರಿಗೆ ಸಾಥ್ ನೀಡುವಂತೆ ಕಾಂಗ್ರೆಸ್ ಹಾಗೂ ಎನ್ ಸಿಪಿ ಗೆ ಆಹ್ವಾನ ನೀಡಲಾಗುವುದು ಎಂದು ಶಿವಸೇನಾ ನಾಯಕ ಸಂಜಯ್ ರೌತ್ ಅವರು ಗುರುವಾರ ಹೇಳಿದ್ದಾರೆ.

ಶ್ರೀರಾಮನಿಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯಾಗುವುದಿಲ್ಲಿ ಎಂದು ಸೇನಾ ನಾಯಕ ಹೇಳಿದ್ದಾರೆ.

ಅಯೋಧ್ಯೆ ಭೇಟಿ ವೇಳೆ ನಮ್ಮೊಂದಿಗೆ ಸೇರಿಕೊಳ್ಳುವಂತೆ ನಮ್ಮ ಮಿತ್ರ ಪಕ್ಷಗಳು ಸೇರಿದಂತೆ ಎಲ್ಲರಿಗೂ ಆಹ್ವಾನ ನೀಡಲಾಗುವುದು. ಮನೆಯಲ್ಲಿ ಎಲ್ಲರೂ ರಾಮನ ಪೂಜೆ ಮಾಡುತ್ತಾರೆ. ಹೀಗಾಗಿ ಅಯೋಧ್ಯೆಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಿರುವ ನಮ್ಮೊಂದಿಗೆ ಕೈಜೋಡಿಸಬಹುದು ಎಂದು ರೌತ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾದ ನಂತರ ಮತ್ತು ಬಿಜೆಪಿ ಜತೆ ಮೈತ್ರಿ ಮುರಿದುಕೊಂಡ ನಂತರ ಮೊದಲ ಬಾರಿಗೆ ಉತ್ತರ ಪ್ರದೇಶ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಕಳೆದ ವರ್ಷ ನವೆಂಬರ್ 28ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಉದ್ಧವ್ ಠಾಕ್ರೆ ಅವರು, ಇತ್ತೀಚಿಗಷ್ಟೇ 50 ದಿನಗಳ ಅಧಿಕಾರವಧಿ ಪೂರೈಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com