ಪೌರತ್ವ ಕಾಯ್ದೆ ಜಾರಿಗೆ ತರುವ ಮೂಲಕ ಭಾರತ ತನ್ನ ನೈತಿಕ ಕರ್ತವ್ಯವನ್ನು ಪೂರೈಸಿದೆ: ರಕ್ಷಣಾ ಸಚಿವ

ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಧಾರ್ಮಿಕ ಅಲ್ಪಸಂಖ್ಯಾತರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಇಂತಹ ಜನರಿಗಾಗಿ ಪೌರತ್ವ ಕಾಯ್ದೆ ಜಾರಿಗೆ ತರುವ ಮೂಲಕ ಭಾರತ ತನ್ನ ನೈತಿಕ ಕರ್ತವ್ಯವನ್ನು ಪೂರೈಸಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. 
ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮೀರುತ್: ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಧಾರ್ಮಿಕ ಅಲ್ಪಸಂಖ್ಯಾತರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಇಂತಹ ಜನರಿಗಾಗಿ ಪೌರತ್ವ ಕಾಯ್ದೆ ಜಾರಿಗೆ ತರುವ ಮೂಲಕ ಭಾರತ ತನ್ನ ನೈತಿಕ ಕರ್ತವ್ಯವನ್ನು ಪೂರೈಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. 

ಶತಾಬ್ದಿ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ರ್ಯಾಲಿಯಲ್ಲಿ ಭಾಗಿಯಾಗಿದ್ದ ರಾಜನಾಥ ಸಿಂಗ್ ಅವರು, ಪೌರತ್ವ ಕಾಯ್ದೆ ಜಾರಿಗೆ ತರುವ ಮೂಲಕ ಭಾರತ ತನ್ನ ನೈತಿಕ ಕರ್ತವ್ಯವನ್ನು ಪೂರ್ಣಗೊಳಿಸಿದೆ. ಕಾಯ್ದೆ ಕುರಿತು ಸರ್ಕಾರ ಒಡಕು ತಂತ್ರವನ್ನು ರೂಪಿಸಿದೆ ಎಂಬ ಆರೋಪಗಳು ಸುಳ್ಳು. ಲಾಭಕ್ಕಾಗಿ ಧಾರ್ಮಿಕ ವಿಚಾರದಲ್ಲಿ ಬಿಜೆಪಿ ಎಂದಿಗೂ ರಾಜಕೀಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. 

ಭಾರತದ ಶಕ್ತಿಯನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಸ್ವಂತ ಲಾಭಕ್ಕಾಗಿ ನಾವು ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುವುದಿಲ್ಲ. ಪೌರತ್ವ ಕಾಯ್ದೆಯನ್ನು ಹಿಂದು-ಮುಸ್ಲಿಂ ದೃಷ್ಟಿಕೋನದಿಂದ ನೋಡಲಾಗುತ್ತಿದೆ. ಆದರೆ, ಪ್ರಧಾನಿ ಮೋದಿಯವಪು ನ್ಯಾಯದ ಕುರಿತು ಮಾತನಾಡುತ್ತಾರೆ. ಅಧಿಕಾರಕ್ಕೆ ಬಂದ ಅವಧಿಯಲ್ಲಿಯೇ ನಾವು ಕಾಯ್ದೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದ್ದೆವು. ಆದರೆ, ಅದು ಸಾಧ್ಯವಾಗಿರಲಿಲ್ಲ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಎನ್ಆರ್'ಸಿ ಬಗ್ಗೆ ಮಾತನಾಡಿದ ಅವರು, ಎನ್ಆರ್ಸಿ ಬಗ್ಗೆ ಸರ್ಕಾರ ಇನ್ನೂ ಚರ್ಚೆ ನಡೆಸಿಲ್ಲ. ಒಂದು ವೇಳೆ ಮಾಡಿದ್ದರೂ. ಪೌರತ್ವ ನೋಂದಣಿ ಮಾಡಲು ಸಮಸ್ಯೆಯೇನಿದೆ ಎಂದು ಪ್ರಶ್ನಿಸಿದ್ದಾರೆ. 

ನಿಮ್ಮ ಪೌರತ್ವ ನೋಂದಣಿಯಾಗುವುದು ಬೇಡವೇ? ಸರ್ಕಾರದ ಯೋಜನೆಗಳ ಲಾಭ ಜನರಿಗೆ ತರಪಲು ಇದೊಂದು ದಾಖಲೆಯಾಗುವುದು ಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com