ಭಾರತಕ್ಕೂ ಕಾಲಿಟ್ಟ ಕೊರೋನಾ ವೈರಸ್?: ಮುಂಬೈನಲ್ಲಿ ಇಬ್ಬರ ತಪಾಸಣೆ, ಚಿಕಿತ್ಸೆಗೆ ವಿಶೇಷ ಕೊಠಡಿ ರಚನೆ

ನೆರೆ ರಾಷ್ಟ್ರ ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಣಾಂತಿಕ ಕೊರೋನಾ ವೈರಸ್ ಇದೀಗ ಭಾರತದಲ್ಲಿಯೂ ಕಾಲಿಟ್ಟಿರುವ ಶಂಕೆಗಳು ವ್ಯಕ್ತವಾಗಿದ್ದು, ವಾಣಿಜ್ಯ ನಗರಿ ಮುಂಬೈನಲ್ಲಿ ಚೀನಾದಿಂದ ಬಂದಿರುವ ಇಬ್ಬರು ವ್ಯಕ್ತಿಗಳನ್ನು ವೈದ್ಯಕೀಯ ತಪಾಸಣೆಗೊಳಪಡಿಸವಾಗಿದೆ ಎಂದು ವರದಿಗಳು ತಿಳಿಸಿವೆ. 

Published: 24th January 2020 01:17 PM  |   Last Updated: 24th January 2020 01:17 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಮುಂಬೈ: ನೆರೆ ರಾಷ್ಟ್ರ ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಣಾಂತಿಕ ಕೊರೋನಾ ವೈರಸ್ ಇದೀಗ ಭಾರತದಲ್ಲಿಯೂ ಕಾಲಿಟ್ಟಿರುವ ಶಂಕೆಗಳು ವ್ಯಕ್ತವಾಗಿದ್ದು, ವಾಣಿಜ್ಯ ನಗರಿ ಮುಂಬೈನಲ್ಲಿ ಚೀನಾದಿಂದ ಬಂದಿರುವ ಇಬ್ಬರು ವ್ಯಕ್ತಿಗಳನ್ನು ವೈದ್ಯಕೀಯ ತಪಾಸಣೆಗೊಳಪಡಿಸವಾಗಿದೆ ಎಂದು ವರದಿಗಳು ತಿಳಿಸಿವೆ. 

ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಇರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ವಿಶೇಷ ಕೊಠಡಿ ಸ್ಥಾಪನೆ ಮಾಡಿ ತಪಾಸಣೆ ನಡೆಸಲಾಗುತ್ತಿದೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮಾಹಿತಿ ನೀಡಿದೆ. 

ಚೀನಾದಿಂದ ಬಂದಿರುವ ಇಬ್ಬರು ವ್ಯಕ್ತಿಗಳ ಆರೋಗ್ಯವನ್ನು ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾರೆ. ಇಬ್ಬರು ವ್ಯಕ್ತಿಗಳಲ್ಲಿ ಕೆಮ್ಮು ಹಾಗೂ ಶೀತದಂತ ಕೊರೋನಾ ವೈರಸ್ ಗುಣಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಬಿಎಂಸಿ ಕಾರ್ಯನಿರ್ವಹಣಾ ಆರೋಗ್ಯಾಧಿಕಾರಿ ಡಾ.ಪದ್ಮಜಾ ಕೆಸ್ಕರ್ ಅವರು ಹೇಳಿದ್ದಾರೆ. 

ಇನ್ನು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚೀನಾದಿಂದ ಬರುವ ಪ್ರವಾಸಿಗರನ್ನು ವಿಶೇಷ ಕೊಠಡಿಗೆ ಕಳುಹಿಸಿ ಆರೋಗ್ಯ ತಪಾಸಣೆ ನಡೆಸುವಂತೆಯೂ ನಿಲ್ದಾಣದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ಚೀನಾದಿಂದ ಬರುವ ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದೇ ಆದರೆ, ಕೂಡಲೇ ಮಾಹಿತಿ ನೀಡುವಂತೆಯೂ ನಗರದ ಎಲ್ಲಾ ಖಾಸಗಿ ವೈದ್ಯರಿಗೂ ಸೂಚನೆ ನೀಡಲಾಗಿದೆ ಎಂದಿದ್ದಾರೆ. 

ಕೊರೋನಾ ವೈರಸ್ ವೊದು ಜಾತಿಯ ವೈರಸ್ ಆಗಿದೆ. ಸೂಕ್ಷ್ಮ ದರ್ಶಕದಲ್ಲಿ ಇದು ಕಿರೀಟ ರೀತಿ ಕಾಣಿಸುತ್ತದೆ. ಲ್ಯಾಟಿನ್ ಭಾಷೆಯಲ್ಲಿ ಕೊರೋನಾ ಎಂದರೆ ಕಿರೀಟ ಎಂದರ್ಥ. ಹೀಗಾಗಿ ವೈರಸ್'ಗೆ ಕೊರೋನಾ ಹೆಸರು. ಚೀನಾದ ವುಹಾನ್ ನಗರದಲ್ಲಿನ ಅಕ್ರಮ ವನ್ಯ ಜೀವಿ ಮಾಂಸ ಕೇಂದ್ರದ ಮೂಲಕ ಮಾನವರಿಗೆ ವೈರಸ್ ತಗುಲಿದೆ. ಸೋಂಕು ತಗುಲಿದವರು ತೀವ್ರ ಶೀತ, ಕೆಮ್ಮು, ಗಂಟಲು ಕಟ್ಟುವಿಕೆ, ಉಸಿರಾಟದ ತೊಂದರೆ, ತಲೆನೋವು, ಜ್ವರದ ಸಮಸ್ಯೆಗೆ ತುತ್ತಾಗುತ್ತಾರೆ. 

ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಚೀನಾ ಸರ್ಕಾರ ಕಂಡು ಕೇಳರಿಯದ ರೀತಿ ಎನ್ನಬಹುದಾದ ತುರ್ತು ಕ್ರಮಗಳನ್ನು ಘೋಷಣೆ ಮಾಡಿದೆ. 

830 ಮಂದಿಯಲ್ಲಿ ವೈರಾಣು ಕಂಡು ಬಂದಿದ್ದು, ಇದರಲ್ಲಿ 177 ಜನರ ಸ್ಥಿತಿ ಚಿಂತಾಜನಕವಾಗಿದೆ. ಸೋಂಕು ತಗುಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 34 ಮಂದಿ ಚಿಕಿತ್ಸೆ ಪಡೆದಿದ್ದು, ಇದೀಗ ಗುಣಮುಖರಾಗಿದ್ದಾರೆ. ಸಮುದ್ರ ಆಹಾರ ಮತ್ತು ಮಾಂಸಾಹಾರದಿಂದ ವುಹಾನ್ ನಲ್ಲಿ ಈ ವೈರಸ್ ಹರಡಿಸುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp