ದೆಹಲಿ: ಬಿಜೆಪಿ ಅಭ್ಯರ್ಥಿ ಕಪಿಲ್ ಮಿಶ್ರಾ ಟ್ವೀಟ್ ತೆಗೆದುಹಾಕಲು ಟ್ವಿಟರ್ ಗೆ ಚುನಾವಣಾ ಆಯೋಗ ಸೂಚನೆ!

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ  ಬಿಜೆಪಿ ಅಭ್ಯರ್ಥಿ  ಕಪಿಲ್ ಮಿಶ್ರಾ ಅವರ ವಿವಾದಾತ್ಮಕ ಟ್ವೀಟ್ ಅನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗ ಟ್ವಿಟರ್ ಗೆ  ಸೂಚಿಸಿದೆ
ಬಿಜೆಪಿ ಅಭ್ಯರ್ಥಿ ಕಪಿಲ್ ಮಿಶ್ರಾ
ಬಿಜೆಪಿ ಅಭ್ಯರ್ಥಿ ಕಪಿಲ್ ಮಿಶ್ರಾ

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ  ಬಿಜೆಪಿ ಅಭ್ಯರ್ಥಿ  ಕಪಿಲ್ ಮಿಶ್ರಾ ಅವರ ವಿವಾದಾತ್ಮಕ ಟ್ವೀಟ್ ಅನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗ ಟ್ವಿಟರ್ ಗೆ  ಸೂಚಿಸಿದೆ. ದೆಹಲಿಯ ಚುನಾವಣೆಯನ್ನು ಭಾರತ ಮತ್ತು ಪಾಕಿಸ್ತಾನ ನಡುವಣ ಸ್ಪರ್ಧೆಗೆ ಹೋಲಿಸಿ ಕಪಿಲ್ ಮಿಶ್ರಾ ಟ್ವೀಟ್ ಮಾಡಿದ್ದರು. 

ದೆಹಲಿ ಮುಖ್ಯ ಚುನಾವಣಾಧಿಕಾರಿ  ಚುನಾವಣಾ ಆಯೋಗಕ್ಕೆ  ಪತ್ರ ಬರೆದ ನಂತರ ಮಿಶ್ರಾ ಗುರುವಾರ ಪೋಸ್ಟ್ ಮಾಡಿದ ಟ್ವೀಟ್ ಅನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಮುಖ್ಯ ಚುನಾವಣಾಧಿಕಾರಿಗಳು ಮಾಡೆಲ್ ಟೌನ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ  ಕಪಿಲ್ ಮಿಶ್ರಾಗೆ ಶೋಕಾಸ್ ನೋಟಿಸ್ ನೀಡಿದೆ.

ಅರವಿಂದ್ ಕೇಜ್ರಿವಾಲ್ ಸಂಪುಟದ ಮಾಜಿ ಸಚಿವ ಫೆಬ್ರವರಿ 8 ರಂದು ನಡೆಯಲಿರುವ ಚುನಾವಣೆ ದೆಹಲಿಯಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವಣ ಸ್ಪರ್ಧೆ ಆಗಿದೆ ಎಂದು ಟ್ವೀಟ್ ಮಾಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com