ನಮ್ಮ ಹಕ್ಕುಗಳಿಗಿಂತ ಕರ್ತವ್ಯ ಮುಖ್ಯ: ಪ್ರಧಾನಿ ಮೋದಿ

ದೇಶದ ಸಂವಿಧಾನ ನಮಗೆ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದೆಯಾದರೂ ಹಕ್ಕುಗಳಿಗಿಂತ ನಮಗೆ ಕರ್ತವ್ಯಗಳು ಮುಖ್ಯ ಎನ್ನುವುದನ್ನು ಅರಿತುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದ ಸಂವಿಧಾನ ನಮಗೆ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದೆಯಾದರೂ ಹಕ್ಕುಗಳಿಗಿಂತ ನಮಗೆ ಕರ್ತವ್ಯಗಳು ಮುಖ್ಯ ಎನ್ನುವುದನ್ನು ಅರಿತುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. 

ಈ ಬಾರಿ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಪಾತ್ರವಾಗಿರುವ ೪೯ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, ಚಿಕ್ಕವಯಸ್ಸಿನಲ್ಲಿಯೇ ಪ್ರಶಸ್ತಿ ವಿಜೇತ ಮಕ್ಕಳು ಮಾಡಿರುವ ಅಪ್ರತಿಮ ಸಾಧನೆ ನನಗೆ ಮತ್ತಷ್ಟು ಸ್ಫೂರ್ತಿ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅತ್ಯಂತ ಕ್ಲಿಷ್ಠಕರ ಪರಿಸ್ಥಿತಿಯಲ್ಲಿ ಈ ಮಕ್ಕಳು ಅಸಾಧಾರಣ ಧೈರ್ಯ ಪ್ರದರ್ಶಿಸಿದ್ದಾರೆ. ಪ್ರಶಸ್ತಿ ಪುರಸ್ಕಾರಗಳು ಸಾಧನೆಗಳಿಗೆ ಪೂರ್ಣವಿರಾಮವಾಗಬಾರದು. ದೇಶಕ್ಕೆ ಇನ್ನೂ ಹೆಚ್ಚಿನ ಅಮೂಲ್ಯ ಕೊಡುಗೆಗಳನ್ನು ನೀಡುವ ಸಾಮರ್ಥ್ಯದ ಬಗ್ಗೆ ಮಕ್ಕಳು ಸದಾ ಉತ್ಸಾಹ ಹೊಂದಿರಬೇಕು ಎಂದು ಹೇಳಿದರು. 

ಹಲವು ವಲಯಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ಮಕ್ಕಳ ಪ್ರಯತ್ನಗಳಿಗೆ ಅಭಿನಂದನೆ ಸಲ್ಲಿಸುವ ಮತ್ತು ಅವರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಗಳನ್ನು ನೀಡಲಾಗುತ್ತದೆ. 

ಅನ್ವೇಷಣೆ, ಸಮಾಜಸೇವೆ, ವೈಚಾರಿಕತೆ, ಕ್ರೀಡೆ, ಧೈರ್ಯ, ಸಾಹಸ ಹಾಗೂ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಮಕ್ಕಳಿಗೆ ಬಾಲಶಕ್ತಿ ಪುರಸ್ಕಾರ ನೀಡಲಾಗುತ್ತದೆ. 

ಈ ಪ್ರಶಸ್ತಿ ಅಭಿನಂದನಾ ಪದಕ, ಒಂದು ಲಕ್ಷ ರೂಪಾಯಿ ನಗದು ಮತ್ತು ಅಭಿನಂದನಾ ಪತ್ರವನ್ನು ಒಳಗೊಂಡಿದೆ. 

ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಈ ಮಕ್ಕಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುರಸ್ಕಾರಗಳನ್ನು ವಿತರಿಸಿ ಗೌರವಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com