ತಮಿಳುನಾಡಿನಲ್ಲಿ ಎನ್ ಪಿಆರ್ ಪ್ರಕ್ರಿಯೆಗೆ ಸರ್ಕಾರ ಅವಕಾಶ ನೀಡಬಾರದು- ಸ್ಟಾಲಿನ್ 

ತಮಿಳುನಾಡಿನಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್ ) ಪ್ರಕ್ರಿಯೆಗೆ ಅವಕಾಶ ನೀಡಬಾರದು ಎಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದಾರೆ.
ಡಿಎಂಕೆ ಮುಖ್ಯಸ್ಥ ಸ್ಟಾಲಿನ್
ಡಿಎಂಕೆ ಮುಖ್ಯಸ್ಥ ಸ್ಟಾಲಿನ್

ಚೆನ್ನೈ: ತಮಿಳುನಾಡಿನಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್ ) ಪ್ರಕ್ರಿಯೆಗೆ ಅವಕಾಶ ನೀಡಬಾರದು ಎಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಡಿಎಂಕೆ ಜನರ ಬಳಿ ತೆರಳಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ  ವಿರುದ್ಧ ಫೆಬ್ರವರಿ 2ರಿಂದ 8ರವರೆಗೂ ಸಹಿ ಸಂಗ್ರಹ  ಅಭಿಯಾನ ನಡೆಸಲಾಗುವುದು. ಎಲ್ಲಾ ಮೈತ್ರಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭಿಯಾನ ಮುಗಿಸಿದ ನಂತರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು  ಎಂದು ಅವರು  ಸುದ್ದಿಗಾರರೊಂದಿಗೆ ತಿಳಿಸಿದರು.

ವಿದ್ಯಾರ್ಥಿಗಳು, ವರ್ತಕರು ಹಾಗೂ ಸಮಾಜದ ಎಲ್ಲಾ ವರ್ಗದ ಜನರು ಸಹಿ ಸಂಗ್ರಹ ಅಭಿಯಾನಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ ಸ್ಟಾಲಿನ್, ಸಿಎಎ ಹಿಂತೆಗೆದುಕೊಳ್ಳುವುದಿಲ್ಲ ಎಂದು ಅಮಿತ್ ಶಾ ಹೇಳುತ್ತಾರೆ ಆದರೆ, ನಾವು ಪ್ರತಿಭಟನೆಯನ್ನು ಮುಂದುವರೆಸುತ್ತೇವೆ. ಸಿಎಎ ವಿಚಾರದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com