ಇಂದೋರ್: ಪೌರತ್ವ ಕಾಯ್ದೆ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ವ್ಯಕ್ತಿ, ಸ್ಥಿತಿ ಗಂಭೀರ

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರುದ್ಧದ ಪ್ರತಿಭಟನೆ ವೇಳೆ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಸಾವು-ಬದುಕಿನ ನಡುವೆ ಹೋರಾಟ ನಡೆೆಸುತ್ತಿರುವ ಘಟನೆ ಇಂದೋರ್ ನಲ್ಲಿ ಶುಕ್ರವಾರ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಭೋಪಾಲ್: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರುದ್ಧದ ಪ್ರತಿಭಟನೆ ವೇಳೆ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಸಾವು-ಬದುಕಿನ ನಡುವೆ ಹೋರಾಟ ನಡೆೆಸುತ್ತಿರುವ ಘಟನೆ ಇಂದೋರ್ ನಲ್ಲಿ ಶುಕ್ರವಾರ ನಡೆದಿದೆ. 

ರಮೇಶ್ ಚಂದ್ರ ಪ್ರಜಾಪತಿ (72) ಬೆಂಕಿ ಹಚ್ಚಿಕೊಂಡ ವ್ಯಕ್ತಿಯಾಗಿದ್ದು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಸದಸ್ಯರಾಗಿದ್ದಾರೆಂದು ತಿಳಿದುಬದಿದೆ. 

ಪ್ರಸ್ತುತ ವ್ಯಕ್ತಿ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯ ಜೇಬಿನಲ್ಲಿ ಪಾಕೆಟ್ ನಲ್ಲಿ ಪೌರತ್ವ ಕಾಯ್ದ ಹಾಗೂ ಪೌರತ್ವ ನೋಂದಣಿ ಕಾಯ್ದೆ ವಿರುದ್ಧವಿದ್ದ ಪತ್ರವೊಂದು ದೊರಕಿದೆ ಎಂದು ಪೊಲೀಸರು ಹೇಳಿದ್ದಾರೆ. 

ರಮೇಶ್ ಅವರು ನಿವೃತ್ತ ಸರ್ಕಾರಿ ನೌಕರರಾಗಿದ್ದು, ಇಂದೋರ್ ನಗರದಲ್ಲಿ ನಡೆಯುತ್ತಿದ್ದ ಪೌರತ್ವ ಕಾಯ್ದೆ ವಿರದ್ಧದ ಪ್ರತಿಭಟನೆಗಳಲ್ಲಿ ಸಕ್ರಿಯರಾಗಿದ್ದರು ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com