ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ರಾಜಸ್ಥಾನ

ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ರಾಜಸ್ಥಾನ ವಿಧಾನಸಭೆಯಲ್ಲಿ ಶನಿವಾರ ನಿರ್ಣಯ ಅಂಗೀಕರಿಸಲಾಗಿದೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್

ಜೈಪುರ್: ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ರಾಜಸ್ಥಾನ ವಿಧಾನಸಭೆಯಲ್ಲಿ ಶನಿವಾರ ನಿರ್ಣಯ ಅಂಗೀಕರಿಸಲಾಗಿದೆ. ಈ ಮೂಲಕ ಪಂಜಾಬ್ ಹಾಗೂ ಕೇರಳ ನಂತರ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ ಮೂರನೇ ರಾಜ್ಯವಾಗಿದೆ.

ಇಂದು ಬೆಳಗ್ಗೆ ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಶಾಂತಿ ದಾರಿವಾಲ್ ಅವರು ಸದನದಲ್ಲಿ ನಿರ್ಣಯವನ್ನು ಮಂಡಿಸಿದರು. ಇದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿತು. ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಬಿಸಿ ಬಿಸಿ ಚರ್ಚೆಯ ಬಳಿಕ ನಿರ್ಣಯವನ್ನು ಮತಕ್ಕೆ ಹಾಕಲಾಯಿತು. ಬಳಿಕ ಧ್ವನಿಮತದ ಮೂಲಕ ಸಿಎಎ ವಾಪಸ್ ಪಡೆಯುವಂತೆ ನಿರ್ಣಯ ಅಂಗೀಕರಿಸಲಾಯಿತು.

ಈವರೆಗೂ ಕೇರಳ ಹಾಗೂ ಪಂಜಾಬ್ ವಿಧಾನಸಭೆಯಲ್ಲಿ ಸಿಎಎ ಕುರಿತ ನಿರ್ಣಯವನ್ನು ಮಾತ್ರ ಅಂಗೀಕರಿಸಲಾಗಿದೆ. ಸಿಎಎ ಸಂವಿಧಾನದ ಮೂಲವನ್ನೇ ಉಲ್ಲಂಘಿಸಿದೆ. ಇದರಿಂದ ದೇಶದ ಅಪಾರ ಸಂಖ್ಯೆಯ ಜನರು ಭೀತಿಗೊಳಗಾಗಿದ್ದಾರೆ. ಎನ್ ಪಿಆರ್ ಹಾಗೂ ಎನ್ ಆರ್ ಸಿ ಪ್ರಸ್ತಾವನೆಯೂ ಇದೇ ಆಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಎನ್‌ಪಿಆರ್‌ನ ಹೊಸ ನಿಬಂಧನೆಗಳನ್ನು ಹಿಂತೆಗೆದುಕೊಂಡ ನಂತರವೇ ಜನಗಣತಿ ಕಾರ್ಯಗಳನ್ನು ಮಾಡಬೇಕು.ಪೌರತ್ವ ತಿದ್ದುಪಡಿ ಕಾಯ್ದೆಯ ಇತ್ತೀಚಿನ ತಿದ್ದುಪಡಿಗಳು ಜನರನ್ನು ಧಾರ್ಮಿಕ ಆಧಾರದ ಮೇಲೆ ಪ್ರತ್ಯೇಕಿಸುತ್ತವೆ. ಭಾರತದ ಒಂದು ಭಾಗದ ವ್ಯಕ್ತಿಗಳಿಗೆ ಪೌರತ್ವವನ್ನು ಕಸಿದುಕೊಳ್ಳಲು ಇದನ್ನು  ರೂಪಿಸಲಾಗಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com