ಹೈದರಾಬಾದ್: ಸಿಎಎ ವಿರುದ್ಧ ಪ್ರತಿಭಟನೆಗೆ ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಪೋಲೀಸರ ವಶಕ್ಕೆ

ಪೌರತ್ವ  ಕಾಯ್ದೆ   ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್ಹೈದರಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಭೀಮ್ ಆರ್ಮಿಯ  ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಹೈದರಾಬಾದ್ ನಗರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಚಂದ್ರಶೇಖರ್ ಆಜಾದ್
ಚಂದ್ರಶೇಖರ್ ಆಜಾದ್

ಹೈದರಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಭೀಮ್ ಆರ್ಮಿಯ  ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಹೈದರಾಬಾದ್ ನಗರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಲಂಗರ್ ಹೌಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಉದ್ಯಾನದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಆಜಾದ್ ಅವರನ್ನು  ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆ ನಡೆಸಲು ಪ್ರತಿಭಟನಾಕಾರರು ಪೊಲೀಸರಿಂದ ಯಾವುದೇ ಅನುಮತಿ ಪಡೆದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com