71ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಧಾನಿ ದೆಹಲಿಯಲ್ಲಿರವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ್ದಾರೆ. 
71ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ
71ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಧಾನಿ ದೆಹಲಿಯಲ್ಲಿರವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ್ದಾರೆ. 

ಯುದ್ಧ ಸ್ಮಾರಕಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ವಾಗತಿಸಿದ್ದು, ಬಳಿಕ ಸೇನಾ ಮುಖ್ಯಸ್ಥ ನರವಾಣೆ, ನೌಕಾಪಡೆ ಮುಖ್ಯಸ್ಥ ಕರಂಬೀರ್ ಸಿಂಗ್, ವಾಯುಪಡೆ ಮುಖ್ಯಸ್ಥ ಮಾರ್ಷಲ್ ರಾಕೇಷ್ ಭಡೂರಿಯಾ ಮತ್ತು ಮೂರು ಪಡೆಗಳ ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್ ವೀರ ಯೋಧರಿಗೆ ನಮನ ಸಲ್ಲಿಸಿದರು. 

ಯುದ್ಧ ಸ್ಮಾರಕಕ್ಕೆ ನಮನ ಸಲ್ಲಿಸಿದ ಬಳಿಕ ಪ್ರಧಾನಿ ಮೋದಿಯವರು ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಆರಂಭವಾಗುವ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com