ಕಾಶ್ಮೀರ: ಗಣರಾಜ್ಯೋತ್ಸವ ಹಿನ್ನೆಲೆ ನಿರ್ಬಂಧ ಹೇರಲಾಗಿದ್ದ 2ಜಿ ಇಂಟರ್ನೆಟ್ ಸೇವೆ ಪುನರಾರಂಭ

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ 2ಜಿ ಇಂಟರ್ನೆಟ್ ಸೇವೆಗಳ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ತೆಗೆಯಲಾಗಿದ್ದು, ಮತ್ತೆ 2ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ 2ಜಿ ಇಂಟರ್ನೆಟ್ ಸೇವೆಗಳ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ತೆಗೆಯಲಾಗಿದ್ದು, ಮತ್ತೆ 2ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿದೆ. 

ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಗೊಂಡ ಬಳಿಕ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆಗಳನ್ನು ರದ್ದುಗೊಳಿಸಿತ್ತು. ಇದಾದ ಬಳಿಕ ಸಾಕಷ್ಟು ಸಮಯದ ಬಳಿಕ ಮತ್ತೆ ಇಂಟರ್ನೆಟ್ ಸೇವೆಗಳನ್ನು ಮತ್ತೆ ಆರಂಭ ಮಾಡಿತ್ತು. 

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆಗಳ ದುರ್ಬಳಕೆ ಹೆಚ್ಚಾಗುತ್ತಿದ್ದು, ಉಗ್ರ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕಣಿವೆ ರಾಜ್ಯದಲ್ಲಿ ಇಂಟರ್ನೆಟ್ ಸೇವೆಯ ನಿರ್ಬಂಧಗಳ ಕುರಿತು ಇತ್ತೀಚೆಗಷ್ಟೇ ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು, ಇಂಟರ್ನೆಟ್ ಸಂಪರ್ಕವು ವ್ಯಕ್ತಿಯ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಅವಿಭಾಜ್ಯ ಅಂಗ. ಸರ್ಕಾರದ ನಿರ್ಧಾರದ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತವಾಗುತ್ತದೆ ಎಂಬ ಕಾರಣಕ್ಕೆ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸುವುದು ಸರಿಯಲ್ಲ. ಇಂಟರ್ನೆಟ್ ಸೇವೆ ಒದಗಿಸುವ ಕುರಿತು ವಾರದೊಳಗಾಗಿ ಪರಿಶೀಲನೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com