ಜಗನ್ ಮೋಹನ್ ರೆಡ್ಡಿ
ಜಗನ್ ಮೋಹನ್ ರೆಡ್ಡಿ

ವಿಧಾನಪರಿಷತ್ ರದ್ದು: ಆಂಧ್ರಪ್ರದೇಶ ಸಚಿವ ಸಂಪುಟ ಅನುಮೋದನೆ

13 ವರ್ಷಗಳ ಹಿಂದೆ ತಮ್ಮ ತಂದೆ ಮತ್ತೆ ಅಸ್ತಿತ್ವಕ್ಕೆ ತಂದಿದ್ದ ವಿಧಾನಪರಿಷತ್ ಅನ್ನು ರದ್ದುಗೊಳಿಸುವ ಕುರಿತಂತೆ ಜಗನ್ ಮೋಹನ್ ರೆಡ್ಡಿ ಅಧ್ಯಕ್ಷತೆಯಲ್ಲಿ ಆಂಧ್ರಪ್ರದೇಶ ಸಚಿವ ಸಂಪುಟ ಸಭೆ ಸೋಮವಾರ ಅನುಮೋದನೆ ನೀಡಿದೆ.

ಹೈದರಬಾದ್: 13 ವರ್ಷಗಳ ಹಿಂದೆ ತಮ್ಮ ತಂದೆ ಮತ್ತೆ ಅಸ್ತಿತ್ವಕ್ಕೆ ತಂದಿದ್ದ ವಿಧಾನಪರಿಷತ್ ಅನ್ನು ರದ್ದುಗೊಳಿಸುವ ಕುರಿತಂತೆ ಜಗನ್ ಮೋಹನ್ ರೆಡ್ಡಿ ಅಧ್ಯಕ್ಷತೆಯಲ್ಲಿ ಆಂಧ್ರಪ್ರದೇಶ ಸಚಿವ ಸಂಪುಟ ಸಭೆ ಸೋಮವಾರ ಅನುಮೋದನೆ ನೀಡಿದೆ. 

ವಿಧಾನ ಪರಿಷತ್ತಿನಲ್ಲಿ ಎರಡು ದಿನಗಳ ಕಾಲ ನಡೆದ ಚರ್ಚೆಯ ಮೇಲೆ ಗುರುವಾರ ಆಂಧ್ರದ ವಿಧಾನಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು. ಈ ವೇಲೆ ಸಿಎಂ ಜಗನ್ ಅವರು ಸ್ಪೀಕರ್ ಬಳಿ ವಿಧಾನ ಪರಿಷತ್ತನ್ನು ಉಳಿಸಿಕೊಳ್ಳಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಚರ್ಚಿಸಲು ಸೋಮವಾರ ಅವಕಾಶ ಕೇಳಿದ್ದರು. ಇದೀಗ ವಿಧಾನ ಪರಿಷತ್ತನ್ನು ತೆಗೆದುಹಾಕಲು ಸಂಪುಟ ಅನುಮೋದನೆ ನೀಡಿದೆ ಎಂದು ಆಡಳಿತ ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ. 

ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ ಸೃಷ್ಟಿಸುವ ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿತ್ತು. ಆದರೆ, ಜಗನ್ ಪಕ್ಷ ವೈಎಸ್ಸಾರ್ ಕಾಂಗ್ರೆಸ್ಸಿಗೆ ಬಹುಮತವಿಲ್ಲದ ಕಾರಣ ವಿಧಾನಪರಿಷತ್ ನಲ್ಲಿ ಆ ವಿಧೇಯಕ ಅಂಗೀಕಾರವಾಗಿರಲಿಲ್ಲ. ಬದಲಿಗೆ ಆಯ್ಕೆ ಸಮತಿಯ ಸುಪರ್ದಿಗೆ ಹೋಗಿತ್ತು. ಇದೇ ರೀತಿ ಜಗನ್ ಸರ್ಕಾರ ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳಿಗೆ ವಿಧಾನ ಪರಿಷತ್ ನಲ್ಲಿ ತಡೆ ಒಡ್ಡಲಾಗುತ್ತಿದೆ. ಹೀಗಾಗಿ ಪರಿಷತ್ತನ್ನೇ ರದ್ದುಗೊಳಿಸಲು ಜಗನ್ ನಿರ್ಧರಿಸಿದ್ದರು. 

1985ರ ಮೇ 31ರಂದು ತೆಲುಗು ದೇಶಂ ಸಂಸ್ಥಾಪಕ ಎನ್.ಟಿ.ರಾಮರಾವ್ ಮುಖ್ಯಮಂತ್ರಿಯಾಗಿದ್ದಾಗ ಆಂಧ್ರ ವಿಧಾನ ಪರಿಷತ್ ನ್ನು ರದ್ದುಗೊಳಿಸಿದ್ದರು. ಈ ಸದನದಿಂದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದೆ ಎಂದು ಹೇಳಿದ್ದರು. 22 ವರ್ಷಗಳ ಬಳಿಕ ಅಂದರೆ 2017ರಲ್ಲಿ ರಾಜಶೇಖರ ರೆಡ್ಡಿಯವರು ವಿಧಾನಪರಿಷತ್ ನ್ನು ಮತ್ತೆ ಅಸ್ತಿತ್ವಕ್ಕೆ ತಂದಿದ್ದರು. ಇದೀಗ ಅವರ ಪುತ್ರ ರದ್ದುಗೊಳಿಸಿದ್ದಾರೆ. ಇದಕ್ಕೆ ತೆಲುಗು ದೇಶಂ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಅಧಿಕಾರಕ್ಕೆ ಬಂದರೆ ಪರಿಷತ್ತನ್ನು ಅಸ್ತಿತ್ವಕ್ಕೆ ತರುವುದಾಗಿ ಘೋಷಣೆ ಮಾಡಿದೆ. 

Related Stories

No stories found.

Advertisement

X
Kannada Prabha
www.kannadaprabha.com