ಉದ್ಯೋಗಾವಕಾಶವಿಲ್ಲದೆ ಯುವಕರು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಉದ್ಯೋಗಾವಕಾಶವಿಲ್ಲದೆ ದೇಶದ ಯುವಕರು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ, ದೇಶದ ಯುವಕರು ನಿರುದ್ಯೋಗದಿಂದ ಬಳಲುತ್ತಿರುವ ಇಂತಹ ಸ್ಥಿತಿಯಲ್ಲಿ ಗಣರಾಜ್ಯ ಪ್ರಬಲವಾಗುವುದಾದರೂ ಹೇಗೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಉದ್ಯೋಗಾವಕಾಶವಿಲ್ಲದೆ ದೇಶದ ಯುವಕರು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ, ದೇಶದ ಯುವಕರು ನಿರುದ್ಯೋಗದಿಂದ ಬಳಲುತ್ತಿರುವ ಇಂತಹ ಸ್ಥಿತಿಯಲ್ಲಿ ಗಣರಾಜ್ಯ ಪ್ರಬಲವಾಗುವುದಾದರೂ ಹೇಗೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಕೇವಲ 5 ವರ್ಷಗಳಲ್ಲಿ 3.64 ಕೋಟಿ ಜನರು ನಿರುದ್ಯೋಗದಿಂದ ಬಳಲುತ್ತಿದ್ದಾರೆಂದು ಮಾಧ್ಯಮಗಳು ವರದಿ ಮಾಡಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರು ಮೋದಿ ವಿರುದ್ಧ ಕಿಡಿಕಾರಿದ್ದಾರೆ. 

ಗಣರಾಜ್ಯೋತ್ಸವ ದಿನದಂದು ಉದ್ಯೋಗ ಹುಡುಕಾಡುತ್ತಾ ಸಂಕಷ್ಟ ಅನುಭವಿಸುತ್ತಿರುವ ವಿದ್ಯಾವಂತ ಯುವಕರ ಬಗ್ಗೆ ಚಿಂತಿಸೋಣ. ಉದ್ಯೋಗ ಅಂತಹ ಯುವಕರಿಗೆ ಗೌರವಾನ್ವಿತ ಜೀವನ ನಡೆಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. 

ಉದ್ಯೋಗಾವಕಾಶವಿಲ್ಲದೆ, ಯುವಕರು ತಮ್ಮ ಜೀವನದ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ ದೇಶದ ಗಣರಾಜ್ಯ ಪ್ರಬಲವಾಗುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com