ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಮಮತಾ ಬ್ಯಾನರ್ಜಿ ಸರ್ಕಾರ!

ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಸಾಲಿಗೆ ಇದೀಗ ಪಶ್ಚಿಮ ಬಂಗಾಳ ರಾಜ್ಯ ಸಹ ಸೇರಿಕೊಂಡಿದೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ನವದೆಹಲಿ: ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಸಾಲಿಗೆ ಇದೀಗ ಪಶ್ಚಿಮ ಬಂಗಾಳ ರಾಜ್ಯ ಸಹ ಸೇರಿಕೊಂಡಿದೆ. 

ಕೇರಳ, ಪಂಜಾಬ್ ಮತ್ತು ರಾಜಸ್ಥಾನಗಳ ನಂತರ ಇದೀಗ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದೆ. 

ಪೌರತ್ವ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. 

ವಿಧಾನಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ನಾವು ಸಿಎಎ, ಎನ್ ಪಿಆರ್ ಮತ್ತು ಎನ್ ಆರ್ ಸಿಗಳಿಗೆ ಅನುಮತಿ ನೀಡುವುದಿಲ್ಲ. ಇವುಗಳ ವಿರುದ್ಧ ನಾವು ಶಾಂತಿಯುತವಾಗಿಯೇ ಹೋರಾಡತ್ತೇವೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com