ಸಿಎಎ ವಿರುದ್ಧ ಛತ್ತೀಸ್ ಗಢ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ

ಕಾಂಗ್ರೆಸ್ ನೇತೃತ್ವದ ಛತ್ತೀಸ್ ಗಢ ಸರ್ಕಾರ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಗುರುವಾರ ನಿರ್ಣಯ ಅಂಗೀಕರಿಸಿದ್ದು, ಇದರೊಂದಿಗೆ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ ಐದನೇ ರಾಜ್ಯವಾಗಿದೆ.
ಛತ್ತೀಸ್ ಗಢ ಸಿಎಂ
ಛತ್ತೀಸ್ ಗಢ ಸಿಎಂ

ರಾಯಪುರ್: ಕಾಂಗ್ರೆಸ್ ನೇತೃತ್ವದ ಛತ್ತೀಸ್ ಗಢ ಸರ್ಕಾರ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಗುರುವಾರ ನಿರ್ಣಯ ಅಂಗೀಕರಿಸಿದ್ದು, ಇದರೊಂದಿಗೆ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ ಐದನೇ ರಾಜ್ಯವಾಗಿದೆ.

ಸಿಎಎ ವಿರುದ್ಧ ಛತ್ತೀಸ್ ಗಢ ಮುಖ್ಯಮಂತ್ರಿ ಭುಪೇಶ್ ಭಘೆಲ್ ನೇತೃತ್ವದ ಸಚಿವ ಸಂಪುಟ ಸಭೆ ಇಂದು ನಿರ್ಣಯ ಅಂಗೀಕರಿಸಿದ್ದು, ಕಾಯ್ದೆಯನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ. ಅಲ್ಲದೆ ಮುಂದಿನ ತಿಂಗಳು ಬಜೆಟ್ ಅಧಿವೇಶನದಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಲು ಸಿದ್ಧತೆ ನಡೆಸಿದೆ. 

ಇನ್ನು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಭುಪೇಶ್ ಭಘೆಲ್ ಅವರು, ಧರ್ಮದ ಆಧಾರದ ಮೇಲೆ ಪೌರತ್ವ ಕಾಯ್ದೆ ಜಾರಿ ಮಾಡಿರುವುದು ತಾರತಮ್ಯ ಮಾಡಿದಂತಾಗಿದೆ ಮತ್ತು ಇದು ಸಂವಿಧಾನದ ಕಲಂ 14ಕ್ಕೆ ವಿರುದ್ಧವಾಗಿದ್ದು, ಅದನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನ ಹಾಗೂ ಪಂಜಾಬ್ ಮತ್ತು ಕೇರಳ, ಪಶ್ಚಿಮ ಬಂಗಾಳ ಸರ್ಕಾರಗಳು ಈಗಾಗಲೇ ವಿವಾದಾತ್ಮಕ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com