ಮುಂದಿನ ತಿಂಗಳು ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮನ, ಸಬರಮತಿ ನದಿಗೆ ಭೇಟಿ: ಗುಜರಾತ್ ಸಿಎಂ 

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿಯಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದು ಈ ಸಂದರ್ಭದಲ್ಲಿ ಗುಜರಾತ್ ನ ಸಬರಮತಿ ನದಿಗೆ ಭೇಟಿ ನೀಡಲಿದ್ದಾರೆ ಎಂದು ಅಲ್ಲಿನ ಮುಖ್ಯಮಂತ್ರಿ ವಿಜಯ್ ರೂಪಾಣಿ ತಿಳಿಸಿದ್ದಾರೆ.

Published: 30th January 2020 09:30 AM  |   Last Updated: 30th January 2020 12:59 PM   |  A+A-


PM Narendra Modi and Donald Trump

ಪ್ರಧಾನಿ ನರೇಂದ್ರ ಮೋದಿ-ಡೊನಾಲ್ಡ್ ಟ್ರಂಪ್

Posted By : Sumana Upadhyaya
Source : PTI

ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿಯಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದು ಈ ಸಂದರ್ಭದಲ್ಲಿ ಗುಜರಾತ್ ನ ಸಬರಮತಿ ನದಿಗೆ ಭೇಟಿ ನೀಡಲಿದ್ದಾರೆ ಎಂದು ಅಲ್ಲಿನ ಮುಖ್ಯಮಂತ್ರಿ ವಿಜಯ್ ರೂಪಾಣಿ ತಿಳಿಸಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದಂತೆ ಇಡೀ ಏಷ್ಯಾ ಖಂಡದಲ್ಲಿ ಸಬರಮತಿ ನದಿ ಅತ್ಯಂತ ಸ್ವಚ್ಛವಾಗಿದೆ. ಜಪಾನ್ ಮತ್ತು ಇಸ್ರೇಲ್ ಪ್ರಧಾನ ಮಂತ್ರಿಗಳು ಸೇರಿದಂತೆ ಜಗತ್ತಿನ ಪ್ರಮುಖ ನಾಯಕರು ಇಲ್ಲಿಗೆ ಭೇಟಿ ನೀಡಿ ಇಲ್ಲಿನ ಸೌಂದರ್ಯವನ್ನು ಸವಿದಿದ್ದಾರೆ ಎಂದು ವಿಜಯ್ ರೂಪಾಣಿ ಉತ್ತರ ದೆಹಲಿಯ ಶಾಸ್ತ್ರಿ ನಗರದಲ್ಲಿ ನಿನ್ನೆ ಚುನಾವಣಾ ಪ್ರಚಾರದ ವೇಳೆ ನುಡಿದರು.


ಫೆಬ್ರವರಿ ತಿಂಗಳ ಯಾವ ದಿನದಂದು ಅಮೆರಿಕಾ ಅಧ್ಯಕ್ಷರು ಭೇಟಿ ನೀಡಲಿದ್ದಾರೆ ಎಂಬುದನ್ನು ಗುಜರಾತ್ ಮುಖ್ಯಮಂತ್ರಿ ಹೇಳಲಿಲ್ಲ. ಅವರ ಭೇಟಿ ದಿನಾಂಕವನ್ನು ಭಾರತ ಮತ್ತು ಅಮೆರಿಕಾ ಸರ್ಕಾರಗಳು ಚರ್ಚೆ ನಡೆಸಿ ದಿನಾಂಕವನ್ನು ಸದ್ಯದಲ್ಲಿಯೇ ನಿರ್ಧರಿಸಲಿದೆ. ಫೆಬ್ರವರಿ 24ರಿಂದ 26ರವರೆಗೆ ಡೊನಾಲ್ಡ್ ಟ್ರಂಪ್ ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳಬಹುದು ಎಂದು ಹೇಳಲಾಗುತ್ತಿದೆ.


ಕಳೆದ ವರ್ಷ ಭಾರತ ಸರ್ಕಾರ ಡೊನಾಲ್ಡ್ ಟ್ರಂಪ್ ಅವರಿಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮುಖ್ಯ ಅತಿಥಿಯಾಗಲು ಪಾಲ್ಗೊಳ್ಳಲು ಆಹ್ವಾನಿಸಿತ್ತು. ಆದರೆ ಅವರ ಒತ್ತಡದ ಸಮಯದಿಂದಾಗಿ ಸಾಧ್ಯವಾಗಿರಲಿಲ್ಲ.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp