ಕಾಂಗ್ರೆಸ್ ವಿರುದ್ಧ 'ಸುಳ್ಳು ಜಾಹೀರಾತು' ನೀಡಿದ ಬಿಜೆಪಿಗೆ ಚುನಾವಣಾ ಆಯೋಗದಿಂದ ನೋಟಿಸ್

ದೆಹಲಿ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿದ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿದ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಕಳೆದ ಜನವರಿ 28ರಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ನಿಯೋಗ ನೀಡಿದ ದೂರಿನ ಆಧಾರದ ಮೇಲೆ ಚುನಾವಣಾ ಆಯೋಗ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರಿಗೆ ನೋಟಿಸ್ ನೀಡಿದ್ದು, ಜನವರಿ 31ರೊಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.

ಕಾಂಗ್ರೆಸ್ ವಿರುದ್ಧ ಬಿಜೆಪಿ ಮುದ್ರಣ ಮಾಧ್ಯಮದಲ್ಲಿ ಸುಳ್ಳು, ಆಧಾರ ರಹಿತ ಹಾಗೂ ನಿಷ್ಪ್ರಯೋಜಕ ಆರೋಪಗಳನ್ನು ಮಾಡಿದ್ದು, ಈ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಲಾಗಿದೆ ಎಂದು ಚುನಾವಣಾ ಆಯೋಗ ನೋಟಿಸ್ ನಲ್ಲಿ ತಿಳಿಸಿದೆ.

ಸುಳ್ಳು ಜಾಹೀರಾತಿಗೆ ಸಂಬಂಧಿಸಿದಂತೆ ಜನವರಿ 31ರ ಮಧ್ಯಾಹ್ನದೊಳಗೆ ಸ್ಪಷ್ಟನೆ ನೀಡಬೇಕು. ಒಂದು ವೇಳೆ ಸ್ಪಷ್ಟನೆ ನೀಡದಿದ್ದರೆ ಆಯೋಗ ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಬಿಜೆಪಿಗೆ ನೀಡಿದ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com