ನಿರ್ಭಯಾ ಪ್ರಕರಣ: ಅಕ್ಷಯ್ ಕುಮಾರ್ ಸಿಂಗ್ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಾಲ್ವರು ಆರೋಪಿಗಳ ಪೈಕಿ ಒಬ್ಬನಾದ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾ ಮಾಡಿದೆ.
ಅಕ್ಷಯ್ ಕುಮಾರ್ ಸಿಂಗ್
ಅಕ್ಷಯ್ ಕುಮಾರ್ ಸಿಂಗ್

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಾಲ್ವರು ಆರೋಪಿಗಳ ಪೈಕಿ ಒಬ್ಬನಾದ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾ ಮಾಡಿದೆ.

ನ್ಯಾಯಮೂರ್ತಿಗಳಾದ ಎನ್ ವಿ ರಮಣ, ಅರುಣ್ ಮಿಶ್ರಾ, ಆರ್ ಎಫ್ ನಾರಿಮನ್, ಆರ್ ಬಾನುಮತಿ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ  ಪಂಚ ನ್ಯಾಯಾಧೀಶರ ಪೀಠ ಅಕ್ಷಯ್ ಕುಮಾರ್ ಸಿಂಗ್ಮರಣದಂಡನೆಯನ್ನು ತಡೆಹಿಡಿಯುವಂತೆ ಮಾಡಿದ ಮನವಿಯನ್ನು ತಿರಸ್ಕರಿಸಿತು.

"ಮರಣದಂಡನೆಗೆ ತಡೆ ನೀಡಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ" ಎಂದು ನ್ಯಾಯಪೀಠ ಹೇಳಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com