ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

3ನೇ ಸುತ್ತಿನ ಕೋರ್ ಕಮಾಂಡರ್ ಮಟ್ಟದ ಮಾತುಕತೆ: ಕೊನೆಯಾಗುತ್ತಾ ಭಾರತ-ಚೀನಾ ಸಂಘರ್ಷ

ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ 15 ದಿನಗಳ ಹಿಂದೆ ನಡೆದ ಹಿಂಸಾತ್ಮಕ ಘರ್ಷಣೆ ಬಳಿಕ ಭಾರತ-ಚೀನಾ ನಡುವೆ ಸತತ ಮಿಲಿಟರಿ ಮಟ್ಟದ ಮಾತುಕತೆಗಳು ನಡೆಯುತ್ತಿದ್ದು, ಮೂರನೇ ಸುತ್ತಿನ ಕೋರ್ ಕಮಾಂಡರ್ ಮಟ್ಟದ ಮಾತುಕತೆ ಕಳೆದ ರಾತ್ರಿ ಮುಗಿದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ನವದೆಹಲಿ: ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ 15 ದಿನಗಳ ಹಿಂದೆ ನಡೆದ ಹಿಂಸಾತ್ಮಕ ಘರ್ಷಣೆ ಬಳಿಕ ಭಾರತ-ಚೀನಾ ನಡುವೆ ಸತತ ಮಿಲಿಟರಿ ಮಟ್ಟದ ಮಾತುಕತೆಗಳು ನಡೆಯುತ್ತಿದ್ದು, ಮೂರನೇ ಸುತ್ತಿನ ಕೋರ್ ಕಮಾಂಡರ್ ಮಟ್ಟದ ಮಾತುಕತೆ ಕಳೆದ ರಾತ್ರಿ ಮುಗಿದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಭಾರತ-ಚೀನಾ ಸೇನೆ ನಡುವಿನ ಕೋರ್ ಕಮಾಂಡರ್ ಮಟ್ಟದ ಮಾತುಕತೆ ಚುಶುಲ್ ಎಂಬ ಪ್ರದೇಶದಲ್ಲಿ ನಡೆದು ರಾತ್ರಿ 11 ಗಂಟೆಗೆ ಮುಕ್ತಾಯವಾಯಿತು ಎಂದು ಸೇನಾ ಮೂಲಗಳು ತಿಳಿಸಿವೆ. ಮೊದಲೆರಡು ಸುತ್ತಿನ ಮಾತುಕತೆ ಗಡಿ ವಾಸ್ತವ ರೇಖೆಯ ಚೀನಾ ಕಡೆಯ ಮೊಲ್ಡೊ ಎಂಬಲ್ಲಿ ನಡೆಯಿತು.

ಸತತ 12 ಗಂಟೆಗಳ ಕಾಲ ನಡೆದ ಈ ಮಾತುಕತೆಯಲ್ಲಿ ಈ ಹಿಂದೆ ನಡೆದ ಕಹಿ ಘಟನೆಗಳನ್ನು ಪ್ರಸ್ತಾಪಿಸದೆ ಗಡಿಯಿಂದ ಉಭಯ ಸೇನಾ ಪಡೆಗಳನ್ನು ಹಿಂದಕ್ಕೆ ಪಡೆಯುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಗಡಿ ವಾಸ್ತವ ರೇಖೆಯಲ್ಲಿ ಸೇನಾಪಡೆಯನ್ನು ಹಿಂಪಡೆಯಬೇಕೆಂಬುದು ಭಾರತದ ಒತ್ತಾಯವಾಗಿದೆ.

ಪ್ರತಿ ಬಾರಿಯಂತೆ ಈ ಬಾರಿಯೂ ಗಡಿಯಿಂದ ಸೈನ್ಯ ಹಿಂಪಡೆಯುವ ಪ್ರಸ್ತಾವನೆಗೆ ಚೀನಾ ಸೇನೆ ಸಮ್ಮತಿ ಸೂಚಿಸಿದ್ದು, ಉದ್ವಿಗ್ನತೆ ಕಡಿಮೆ ಮಾಡುವ ನಿಟ್ಟಿನಲ್ಲಿ ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದೆ. ಇನ್ನು ಸದ್ಯದ ಉದ್ವಿಗ್ನತೆಯನ್ನು ಕಡಿಮೆ ಮಾಡಿ ಗಡಿಯಲ್ಲಿ ಶಾಂತಿ ಮರು ಸ್ಥಾಪನೆಗೆ ಒತ್ತು ನೀಡಿರುವ ಭಾರತೀಯ ಸೇನೆ, ಈ ನಿಟ್ಟಿನಲ್ಲಿ ಚೀನಾದ ಸೇನೆಯ ಮನವೊಲಿಸುವಲ್ಲಿ ನಿರತವಾಗಿದೆ ಎಂದು ತಿಳಿದುಬಂದಿದೆ.

Related Stories

No stories found.

Advertisement

X
Kannada Prabha
www.kannadaprabha.com