24 ಗಂಟೆಗಳಲ್ಲಿ ದೇಶಾದ್ಯಂತ 2,29,588 ಕೋವಿಡ್ ಪರೀಕ್ಷೆ, ಜುಲೈ 2ರವರೆಗೆ ಒಟ್ಟಾರೆ 90,56,173 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,29,588 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
Published: 02nd July 2020 10:08 AM | Last Updated: 02nd July 2020 12:14 PM | A+A A-

ಸಂಗ್ರಹ ಚಿತ್ರ
ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,29,588 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,29,588 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜುಲೈ.2ರವರೆಗೂ 90,56,173 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
The total number of samples tested up to July 1 is 90,56,173 of which 2,29,588 samples were tested yesterday: Indian Council of Medical Research (ICMR) pic.twitter.com/qP1Op8MHZV
— ANI (@ANI) July 2, 2020
ಇನ್ನು ದೇಶದಲ್ಲಿ ಕೊರೋನಾ ಸ್ಪೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ 19,148 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,04,641ಕ್ಕೆ ಏರಿಕೆಯಾಗಿದೆ. ಅಂತೆಯೇ ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್'ಗೆ 434 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 17834ಕ್ಕೆ ತಲುಪಿದೆ. 6,04,641 ಮಂದಿ ಸೋಂಕಿತರ ಪೈಕಿ 3,59,860ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 2,26,947 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.