ಸತಾನ್‌ಕುಲಂ ಕಸ್ಟಡಿ ಸಾವು ಪ್ರಕರಣ: ಇನ್ಸ್'ಪೆಕ್ಟರ್ ಶ್ರೀಧರ್ ಸೇರಿ ಐವರು ಪೊಲೀಸರ ಬಂಧನ

ತಮಿಳುನಾಡಿನಲ್ಲಿ ಅಪ್ಪ-ಮಗ ಲಾಕಪ್'ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಇನ್ಸ್'ಪೆಕ್ಟರ್ ಶ್ರೀಧರ್ ಸೇರಿದಂತೆ ಐವರು ಪೊಲೀಸರನ್ನು ಸಿಬಿ-ಸಿಐಡಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. 
ವೈದ್ಯಕೀಯ ಪರೀಕ್ಷೆಗೆ ಎಸ್ಐ ಗಣೇಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಅಧಿಕಾರಿಗಳು
ವೈದ್ಯಕೀಯ ಪರೀಕ್ಷೆಗೆ ಎಸ್ಐ ಗಣೇಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಅಧಿಕಾರಿಗಳು

ತೂತುಕುಡಿ: ತಮಿಳುನಾಡಿನ ಸತಾನ್‌ಕುಲಂನಲ್ಲಿ ಅಪ್ಪ-ಮಗ ಲಾಕಪ್'ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಇನ್ಸ್'ಪೆಕ್ಟರ್ ಶ್ರೀಧರ್ ಸೇರಿದಂತೆ ಐವರು ಪೊಲೀಸರನ್ನು ಸಿಬಿ-ಸಿಐಡಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. 

ಪಿ.ಜಯರಾಜ್ ಮತ್ತು ಅವರ ಮಗ ಫೆನಿಕ್ಸ್ ಅವರನ್ನು ಲಾಕ್'ಡೌನ್ ವೇಳೆ ತಮ್ಮ ಮೊಬೈಲ್ ಅಂಗಡಿ ತೆರೆದು ನಿಯಮ ಉಲ್ಲಂಘನೆ ಮಾಡಿದ್ದಾರೆಂದು ಪೊಲೀಸರು ಆರೋಪಿಸಿ ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಪೊಲೀಸರು ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಪರಿಣಾಮ ಘಟನೆ ನಡೆದ ಒಂದು ವಾರದಲ್ಲಿ ಇಬ್ಬರೂ ಸಾವನ್ನಪ್ಪಿದ್ದರು. ಘಟನೆಗೆ ರಾಷ್ಟ್ರವ್ಯಾಪ್ತಿ ತೀವ್ರ ವಿರೋಧಗಳು ವ್ಯಕ್ತವಾಗಲು ಆರಂಭಿಸಿತ್ತು. 

ಬಳಿಕ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ತಮಿಳುನಾಡು ಸರ್ಕಾರ ಸಿಬಿ-ಸಿಐಡಿ ತನಿಖೆಗೆ ವಹಿಸಿತ್ತು. ಇದರಂತೆ ತನಿಖಾಧಿಕಾರಿಗಳು ಬುಧವಾರ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಇದರಂತೆ ಕಳೆದ ರಾತ್ರಿ ಎಸ್ಐ ಹಾಗೂ ಮುಖ್ಯ ಪೇದೆ ಸೇರಿದಂತೆ ಐವರು ಪೊಲೀಸರನ್ನು ಬಂಧನಕ್ಕೊಳಪಡಿಸಿದ್ದಾರೆ. 

ಪ್ರಕರಣ ಸಂಬಂಧ ಸಬ್ ಇನ್ಸ್ ಪೆಕ್ಟರ್ ರಘು ಗಣೇಶ್ ಅವರೂ ಕೂಡ ಬಂಧನಕ್ಕೊಳಗಾಗಿದ್ದು, ಗಣೇಶ್ ಅವರನ್ನು ಇಂದು ಬೆಳಿಗಿನ ಜಾವ ತೂತುಕುಡಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಸ್ ಹೇಮಾ ಅವರ ಮುಂದೆ ಹಾಜರುಪಡಿಸಲಾಗಿದೆ.

ತೂತುಕುಡಿ ಸರ್ಕಾರಿ ಆಸ್ಪತ್ರೆಯ ವೈದ್ಯರು ವೈದ್ಯಕೀಯ ವರದಿ ನೀಡಿದ ಬಳಿಕ ಸಿಜೆಎಂ ಗಣೇಶ್ ಅವರನ್ನು ಜುಲೈ 14 ರವರೆಗೆ ಪೊಲೀಸರ ವಶಕ್ಕೆ ನೀಡಿದ್ದಾರೆ. ಇದೀಗ ಗಣೇಶ್ ಅವರನ್ನು ಪೆರುರಾಣಿ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com