363 ಕೈದಿಗಳು, 102 ಜೈಲು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್: ಮಹಾರಾಷ್ಟ್ರ ಕಾರಾಗೃಹ ಇಲಾಖೆ

ಮಹಾರಾಷ್ಟ್ರದಲ್ಲಿ ಮಹಾಮಾರಿ ಕೋವಿಡ್-19 ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಈವರೆಗೂ 4 ಮಂದಿ ಖೈದಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ.
ಮುಂಬೈ ಸೆಂಟ್ರಲ್ ಜೈಲು
ಮುಂಬೈ ಸೆಂಟ್ರಲ್ ಜೈಲು

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಮಾರಿ ಕೋವಿಡ್-19 ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಈವರೆಗೂ 4 ಮಂದಿ ಖೈದಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ.

363 ಕೈದಿಗಳು ಹಾಗೂ 102 ಜೈಲು ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪ್ಟಟಿದೆ ಎಂದು ಮಹಾರಾಷ್ಟ್ರ ಕಾರಾಗೃಹ ಇಲಾಖೆ ತಿಳಿಸಿದೆ.

ಮುಂಬೈ ಸೆಂಟ್ರಲ್ ಜೈಲಿನಲ್ಲಿ  ಗರಿಷ್ಠ 181 ಕೈದಿಗಳು ಹಾಗೂ 44 ಜೈಲು ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ. ಈವರೆಗೂ 255 ಕೈದಿಗಳು ಮತ್ತು 82 ಜೈಲು ಸಿಬ್ಬಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕಾರಾಗೃಹ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com