ಮಹಾರಾಷ್ಟ್ರ: ಒಂದೇ ದಿನ 6,330 ಹೊಸ ಕೊರೋನಾ ಪ್ರಕರಣ ಪತ್ತೆ, 125 ಬಲಿ; ಸೋಂಕಿತರ ಸಂಖ್ಯೆ 1,86,626ಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 6,330 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1,86,626ಕ್ಕೇರಿದೆ.
ಕೊರೊನಾ ಸೋಂಕು
ಕೊರೊನಾ ಸೋಂಕು

ಮುಂಬೈ: ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 6,330 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1,86,626ಕ್ಕೇರಿದೆ.

ಈ ಬಗ್ಗೆ ಮಹಾರಾಷ್ಟ್ರದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಗುರುವಾರ ಒಂದೇ ದಿನ 6,330 ಕೊರೋನಾ ವೈರಸ್ ಕೇಸ್​ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 1,86,626ಕ್ಕೆ ಏರಿಕೆಯಾಗಿದೆ. ಇನ್ನು ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 125 ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 8,178ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದಿರುವ ಪ್ರಯಾಣಿಕರಿಂದ ಕರ್ನಾಟಕದಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬೈನಿಂದ ಬರುವ ಪ್ರಯಾಣಿಕರ ಮೇಲೆ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. 

ಇನ್ನು ನಿನ್ನೆ 8,018 ಮಂದಿ ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,01,172ಕ್ಕೆ ಏರಿಕೆಯಾಗಿದೆ. ಅಂತೆಯೇ ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 85,454‬ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com