ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ; 27 ಯುವತಿಯರ ರಕ್ಷಣೆ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್​ನಲ್ಲಿ ಗಿರಾಕಿಗಳನ್ನು ಬರಮಾಡಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಹಿಳಾ ವಿಭಾಗದ ಎಸಿಪಿ ಮದ್ವಿ ಹಾಗೂ ತಂಡ ದಾಳಿ ಮಾಡಿತ್ತು. ಈ ವೇಳೆ ಪ್ರಮುಖ ಆರೋಪಿ ಯೋಗಿಶ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿ, ವಿವಿಧ ರಾಜ್ಯದ 27 ಯುವತಿಯರನ್ನು ಬಂಧಿಸಿದ್ದಾರೆ.

ದಾಳಿ ವೇಳೆ ವಿವಿಧ ರಾಜ್ಯದ ಒಟ್ಟು 27 ಯುವತಿಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ನೇಪಾಳದ 9 ಯುವತಿಯರು, ಪಂಜಾಬ್ ನಾಲ್ಕು, ದೆಹಲಿ ಒಂದು, ಜಮ್ಮು ಕಾಶ್ಮೀರ್ 2, ಮಹಾರಾಷ್ಟ್ರ ಒಂದು ಸೇರಿದಂತೆ ವಿವಿದ ರಾಜ್ಯಗಳ ಒಟ್ಟು 27 ಯುವತಿಯರ ರಕ್ಷಣೆ ಮಾಡಲಾಗಿದೆ. ದಂಧೆ ನಡೆಸುತ್ತಿದ್ದ ಪ್ರಮುಖ ಆರೋಪಿ ಯೋಗೇಶ್ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com