ಪಾಕ್ ಕದನ ವಿರಾಮ ಉಲ್ಲಂಘನೆ ವಿರುದ್ಧ ಭಾರತದಿಂದ ತೀವ್ರ ಪ್ರತಿಭಟನೆ ದಾಖಲು

ಗಡಿ ನಿಯಂತ್ರಣಾ ರೇಖೆ(ಎಲ್ ಒಸಿ)ಯಲ್ಲಿ ಪಾಕಿಸ್ತಾನ ಪಡೆಗಳು ಪದೇಪದೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದರ ವಿರುದ್ಧ ಭಾರತ ಶುಕ್ರವಾರ ತೀವ್ರ ಪ್ರತಿಭಟನೆ ದಾಖಲಿಸಿದೆ.
ಭಾರತೀಯ ಸೇನೆ
ಭಾರತೀಯ ಸೇನೆ

ನವದೆಹಲಿ: ಗಡಿ ನಿಯಂತ್ರಣಾ ರೇಖೆ(ಎಲ್ ಒಸಿ)ಯಲ್ಲಿ ಪಾಕಿಸ್ತಾನ ಪಡೆಗಳು ಪದೇಪದೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದರ ವಿರುದ್ಧ ಭಾರತ ಶುಕ್ರವಾರ ತೀವ್ರ ಪ್ರತಿಭಟನೆ ದಾಖಲಿಸಿದೆ.

ಪಾಕ್‍ ಸೇನಾ ಪಡೆಗಳ ಚಟುವಟಿಕೆಗಳು 2003ರಲ್ಲಿ ಎರಡೂ ದೇಶಗಳ ನಡುವಿನ ಕದನ ವಿರಾಮ ಒಪ್ಪಂದಕ್ಕೆ ತೀರಾ ವಿರುದ್ಧವಾಗಿವೆ ಎಂದು ಭಾರತ ಹೇಳಿದೆ.

‘2003ರ ಕದನ ವಿರಾಮ ಒಂಪದಕ್ಕೆ ವಿರುದ್ಧವಾಗಿ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಪಾಕಿಸ್ತಾನ ಪಡೆಗಳ ನಿರಂತರ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದರ ವಿರುದ್ಧ ಭಾರತ ತನ್ನ ತೀವ್ರ ಪ್ರತಿಭಟನೆಯನ್ನು ದಾಖಲಿಸಿದೆ’ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಈ ವರ್ಷದ ಜೂನ್ ವರೆಗೆ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ 14 ಭಾರತೀಯರು ಸಾವನ್ನಪ್ಪಿದ್ದಾರೆ ಮತ್ತು 88 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com