ಮಿಷನ್ 2022: ಉತ್ತರ ಪ್ರದೇಶ ಸಿಎಂ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ!
ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಲಕ್ನೋ ನಗರಕ್ಕೆ ತಮ್ಮ ವಾಸ ಸ್ಥಾನ ಬದಲಾಯಿಸುತ್ತಿರುವುದು ಹಲವು ಊಹಾ ಪೋಹಗಳಿಗೆ ದಾರಿ ಮಾಡಿಕೊಟ್ಟಿದೆ.
Published: 03rd July 2020 12:38 PM | Last Updated: 03rd July 2020 12:49 PM | A+A A-

ಪ್ರಿಯಾಂಕಾ ಗಾಂಧಿ
ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಲಕ್ನೋ ನಗರಕ್ಕೆ ತಮ್ಮ ವಾಸ ಸ್ಥಾನ ಬದಲಾಯಿಸುತ್ತಿರುವುದು ಹಲವು ಊಹಾ ಪೋಹಗಳಿಗೆ ದಾರಿ ಮಾಡಿಕೊಟ್ಟಿದೆ.
ಇದೇ ವೇಳೆ ಕೆಲವು ನಾಯಕರು ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಒತ್ತಾಯಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಕಾರ್ತಿ ಚಿದಂಬರಂ ''ಹಿರಿಯ ನಾಯಕರು ಲಕ್ನೌದಲ್ಲಿ ನೆಲೆಸಬೇಕು ಹಾಗೂ ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಮುನ್ನಡೆಸಬೇಕು'' ಎಂದಿದ್ದಾರೆ.
'ಉತ್ತರ ಪ್ರದೇಶದ ಮೂಲಕ ರಾಷ್ಟ್ರೀಯ ಕಾಂಗ್ರೆಸ್‌ಗೆ ಪುನರುಜ್ಜೀವನದ ಹಾದಿ ಸಿಗಲಿದೆ. ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶದ ಸಿಎಂ ಅಭ್ಯರ್ಥಿಯಾಗಿ ಘೋಷಿಸುವುದು ಸ್ಪಷ್ಟ ಉದ್ದೇಶವಾಗಿದೆ. ಪ್ರಿಯಾಂಕಾ ಲಕ್ನೌನಲ್ಲಿ ನೆಲೆಸಬೇಕು ಮತ್ತು ಪಕ್ಷವನ್ನು ಮುನ್ನಡೆಸಬೇಕು'' ಎಂದು ಅಭಿಪ್ರಾಯ ಪಟ್ಟಿದ್ದಾರೆ.
2022ರ ಉತ್ತರ ಪ್ರದೇಶ ಚುನಾವಣೆಗಾಗಿ ಪ್ರಿಯಾಂಕಾ ಗಾಂಧಿ ಸಿದ್ದತೆ ನಡೆಸಿದ್ದು ಲಕ್ನೋದಲ್ಲಿ ನೆಲೆಸಲು ನಿರ್ಧರಿಸಿದ್ದಾರೆ. ಪ್ರಿಯಾಂಕಾ ಗಾಗಿ ಕಾಂಗ್ರೆಸ್ ನಾಯಕಿ ಶೀಲಾ ಕೌಲ್ ಲಕ್ನೋದಲ್ಲಿ ಬಂಗಲೆ ಸಿದ್ಧಪಡಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಇನ್ನೂ ಪ್ರಿಯಾಂಕಾ ಮನೆ ಶಿಫ್ಟಿಂಗ್ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ, ಸೂಕ್ತ ಸಮಯದಲ್ಲಿ ಪ್ರಿಯಾಂಕಾ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.