ಲಡಾಖ್ ನಲ್ಲಿ ಚೀನಾ-ಭಾರತ ಸಂಘರ್ಷ: ಗಲ್ವಾನ್ ಕಣಿವೆ ಪ್ರದೇಶಕ್ಕೆ ಪ್ರಧಾನಿ ಮೋದಿ ಹಠಾತ್ ಭೇಟಿ

ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಹಾಗೂ ಭಾರತೀಯ ಸೇನೆ ನಡುವೆ ನಡೆದ ಘರ್ಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಡಾಖ್'ಗೆ ಭೇಟಿ ನೀಡಿದ್ದಾರೆ. 
ಲಡಾಖ್'ಗೆ ಭೇಟಿ ನೀಡಿದ ಪ್ರಧಾನಿ ಮೋದಿ
ಲಡಾಖ್'ಗೆ ಭೇಟಿ ನೀಡಿದ ಪ್ರಧಾನಿ ಮೋದಿ

ಲಡಾಖ್: ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಹಾಗೂ ಭಾರತೀಯ ಸೇನೆ ನಡುವೆ ನಡೆದ ಘರ್ಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಡಾಖ್'ಗೆ ಭೇಟಿ ನೀಡಿದ್ದಾರೆ. 

ಪ್ರಧಾನಿ ಮೋದಿಯವರೊಂದಿಗೆ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಭಾರತೀಯ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರಾವಣೆಯವರು ಕೂಡ ಸಾಥ್ ನೀಡಿದ್ದು, ಗಡಿಯಲ್ಲಿ ಪರಿಸ್ಥಿತಿ ಕುರಿತು ಮಾಹಿತಿ ನೀಡಿದ್ದಾರೆ. 

ಇಂದು ಬೆಳಕಿನ ಜಾವ ಲಡಾಖ್'ನ ಲೆಹ್ ಜಿಲ್ಲೆಯ ನಿಮೂಗೆ ಭೇಟಿ ನೀಡಿದ್ದು, ಭದ್ರತೆಗೆ ನಿಯೋಜನೆಗೊಂಡಿದ್ದ ಯೋಧರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ಭಾರತೀಯ ಸೇನಾಪಡೆ, ವಾಯುಪಡೆ ಹಾಗೂ ಐಟಿಬಿಪಿ ಯೋಧರೊಂದಿಗೂ ಮಾತುಕತೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ.

ಜೂ.15ರಂದು ಭಾರತ ಹಾಗೂ ಚೀನಾ ನಡುವೆ ಭಾರೀ ಸಂಘರ್ಷ ನಡೆದಿತ್ತು, ಚೀನಾ ನಡೆಸಿದ್ದ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಈ ಘಟನೆ ಬಳಿಕ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ತೀವ್ರವಾಗಿ ಹದಗೆಟ್ಟಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com