ಪ್ರಧಾನಿ ಮೋದಿ ಲಡಾಖ್ ಭೇಟಿಯಿಂದ ಯೋಧರ ನೈತಿಕ ಸ್ಥೈರ್ಯ ಹೆಚ್ಚಾಗಿದೆ: ರಾಜನಾಥ್ ಸಿಂಗ್

ಲಡಾಖ್'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿರುವುದು ಯೋಧರ ನೈತಿಕ ಸ್ಥೈರ್ಯ ಹೆಚ್ಚು ಮಾಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ನವದೆಹಲಿ: ಲಡಾಖ್'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿರುವುದು ಯೋಧರ ನೈತಿಕ ಸ್ಥೈರ್ಯ ಹೆಚ್ಚು ಮಾಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದ ಗಡಿಗಳು ಭಾರತೀಯ ಸೇನಾಪಡೆಗಳಿಂದಾಗಿ ಸದಾಕಾಲ ಭದ್ರತೆಯಿಂದಿರುತ್ತದೆ. ಪ್ರಧಾನಿ ಮೋದಿಯವರು ಲಡಾಖ್'ಗೆ ಭೇಟಿ ನೀಡಿದ್ದು, ಇದು ಯೋಧರ ನೈತಿಕ ಸ್ಥೈರ್ಯವನ್ನು ಹೆಚ್ಚು ಮಾಡಿದೆ ಪ್ರಧಾನಮಂತ್ರಿಗಳು ಈ ನಡೆಯನ್ನು ಶ್ಲಾಘಿಸಲೇಬೇಕು. ಇದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಹೇಳಲು ಇಚ್ಛಿಸುತ್ತೇನೆಂದು ಹೇಳಿದ್ದಾರೆ. 

ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಹಾಗೂ ಭಾರತೀಯ ಸೇನೆ ನಡುವೆ ನಡೆದ ಘರ್ಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಡಾಖ್'ಗೆ ಭೇಟಿ ನೀಡಿದ್ದಾರೆ. ಇಂದು ಬೆಳಕಿನ ಜಾವ ಲಡಾಖ್'ನ ಲೆಹ್ ಜಿಲ್ಲೆಯ ನಿಮೂಗೆ ಭೇಟಿ ನೀಡಿದ್ದು, ಭದ್ರತೆಗೆ ನಿಯೋಜನೆಗೊಂಡಿದ್ದ ಯೋಧರ ಜೊತೆಗೆ ಮಾತುಕತೆ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com