ಒಡಿಶಾ: ಕಂದಮಾಲ್‍ನಲ್ಲಿ ಭಾರಿ ಎನ್ಕೌಂಟರ್: ನಾಲ್ವರು ನಕ್ಸಲರ ಸಾವು

ಒಡಿಶಾದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಭೀಕರ ಎನ್ ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಭುವನೇಶ್ವರ: ಒಡಿಶಾದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಭೀಕರ ಎನ್ ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ.

ಒಡಿಶಾದ ಕಂದಮಾಲ್ ಜಿಲ್ಲೆಯ ಸಿರ್ಲಾ ಅರಣ್ಯದಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಬಿಜಿಎನ್ ವಿಭಾಗಕ್ಕೆ ಸೇರಿದ ಮತ್ತು ಪೊಲೀಸರಿಗೆ ಬೇಕಾಗಿದ್ದ ನಾಲ್ವರು ಕುಖ್ಯಾತ ನಕ್ಸಲರು ಹತರಾಗಿದ್ದಾರೆ.

ತುಮುಡಿಬಂದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿರ್ಲಾ ಕಾಡಿನೊಳಗೆ ನಕ್ಸಲರ ಶಿಬಿರ ಕಾರ್ಯನಿರ್ವಹಿಸುತ್ತಿದೆ ಎಂಬ ಸುಳಿವು ಆಧರಿಸಿ ವಿಶೇಷ ಕಾರ್ಯಾಚರಣೆ ತಂಡ, ಯೋಧರು ಮತ್ತು ಜಿಲ್ಲಾ ಸ್ವಯಂಸೇವಕ ಪಡೆ ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ನಡೆದ ಕೂಂಬಿಂಗ್ ಕಾರ್ಯಾಚರಣೆ ನಾಲ್ಕು ಮಂದಿ ನಕ್ಸಲರು ಹತರಾಗಿದ್ದಾರೆ. ಕಾರ್ಯಾಚರಣೆ ವೇಳೆ ಭದ್ರತಾ ಸಿಬ್ಬಂದಿಗಳು ನಕ್ಸಲರು ಬಳಕೆ ಮಾಡಿದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com