11 ದಿನದಲ್ಲಿ ಕೋವಿಡ್-19 ಆಸ್ಪತ್ರೆ ನಿರ್ಮಿಸಿದ ಡಿಆರ್'ಡಿಒ: ರಾಜನಾಥ್ ಸಿಂಗ್, ಅಮಿತ್ ಶಾ ಭೇಟಿ 

ದೆಹಲಿಯಲ್ಲಿ ಡಿಆರ್'ಡಿಒ ಕೇವಲ 11 ದಿನಗಳಲ್ಲಿ ನಿರ್ಮಾಣ ಮಾಡಿರುವ ತಾತ್ಕಾಲಿಕ ಕೋವಿಡ್-19 ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಭೇಟಿ ನೀಡಿದರು. 
ಡಿಆರ್'ಡಿಒ ನಿರ್ಮಿಸಿದ ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಹಾಗೂ ರಕ್ಷಣಾ ಸಚಿವ
ಡಿಆರ್'ಡಿಒ ನಿರ್ಮಿಸಿದ ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಹಾಗೂ ರಕ್ಷಣಾ ಸಚಿವ

ನವದೆಹಲಿ: ದೆಹಲಿಯಲ್ಲಿ ಡಿಆರ್'ಡಿಒ ಕೇವಲ 11 ದಿನಗಳಲ್ಲಿ ನಿರ್ಮಾಣ ಮಾಡಿರುವ ತಾತ್ಕಾಲಿಕ ಕೋವಿಡ್-19 ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಭೇಟಿ ನೀಡಿದರು. 

ಈ ವೇಳೆ ದೆಹಲಿ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಡಿಆರ್'ಡಿಒ ಮುಖ್ಯಸ್ಥ ಜಿ.ಸತೀಶ್ ರೆಡ್ಡಿ ಹಾಜರಿದ್ದರು. 

ದೆಹಲಿಯ ಕಂಟೋನ್ಮೆಂಟ್ ನಲ್ಲಿ ಡಿಆರ್'ಡಿಒ ಕೇವಲ 11 ದಿನಗಳಲ್ಲಿ 1,000 ಹಾಸಿಗೆಯುಳ್ಳ ತಾತ್ಕಾಲಿಕ ಕೋವಿಡ್-19 ಆಸ್ಪತ್ರೆಯನ್ನು ನಿರ್ಮಾಣ ಮಾಡಿದ್ದು, ಈ ಆಸ್ಪತ್ರೆಯು 250 ಐಸಿಯು ಹಾಸಿಗೆಗಳನ್ನು ಒಳಗೊಂಡಿದೆ ಎಂದು ತಿಳಿದುಬಂದಿದೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ವರೆಗೂ 97,200 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಲ್ಲಿ ಈಗಾಗಲೇ 68,256 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನೂ ರಾಜಧಾನಿಯಲ್ಲಿ 25,940 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com