ಉತ್ತರ ಪ್ರದೇಶ: ಕ್ಯಾಂಡಲ್ ಕಾರ್ಖಾನೆಯಲ್ಲಿ ಸ್ಫೋಟ; 7 ಮಂದಿ ಸಾವು, 4 ಗಾಯ

ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಮೋದಿ ನಗರದ ಬಖ್ರಾವಾ ಗ್ರಾಮದಲ್ಲಿನ ಕ್ಯಾಂಡಲ್ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಬೆಂಕಿ ಆಕಸ್ಮಕವಾಗಿ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ.

Published: 05th July 2020 08:34 PM  |   Last Updated: 05th July 2020 08:34 PM   |  A+A-


candle factory

ಕ್ಯಾಂಡಲ್ ಕಾರ್ಖಾನೆ

Posted By : Vishwanath S
Source : UNI

ಲಖನೌ: ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಮೋದಿ ನಗರದ ಬಖ್ರಾವಾ ಗ್ರಾಮದಲ್ಲಿನ ಕ್ಯಾಂಡೆಲ್ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಬೆಂಕಿ ಆಕಸ್ಮಕವಾಗಿ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ.

ಕಾರ್ಖಾನೆಯಲ್ಲಿನ ಸ್ಫೋಟದಲ್ಲಿ ನಾಲ್ವರಿಗೆ ಸುಟ್ಟ ಗಾಯಗಳಾಗಿವೆ ಜಿಲ್ಲಾಧಿಕಾರಿ ಅಕಯ್ ಶಂಕರ್ ಪಾಂಡೆ ದೃಢಪಡಿಸಿದ್ದಾರೆ.

ಕಾರ್ಖಾನೆಯೊಳಗೆ ಅನೇಕರು ಸಿಲುಕಿಕೊಂಡಿದ್ದಾರೆ ಎಂದು ಇಲ್ಲಿನ ಅಧಿಕಾರಿಗಳ ಮೂಲಗಳು ತಿಳಿಸಿವೆ. ಆದರೆ, 10 ಜನರನ್ನು ಸ್ಥಳೀಯ ಜನರು ರಕ್ಷಿಸಿದ್ದಾರೆ.

ಕಾರ್ಖಾನೆಯಲ್ಲಿ ಕೆಲಸಕ್ಕೆ ಮಹಿಳೆಯರನ್ನು ಮಾತ್ರ ತೊಡಗಿಸಿಕೊಂಡಿದ್ದರಿಂದ ಮೃತಪಟ್ಟವರಲ್ಲಿ ಹೆಚ್ಚಿನವರು ಮಹಿಳೆಯರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

Stay up to date on all the latest ರಾಷ್ಟ್ರೀಯ news
Poll
Online education learning

ಆನ್‌ಲೈನ್ ಕಲಿಕೆಯ ಪ್ರಯೋಗವು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತದೆ ಎಂದು ಹಾರ್ವರ್ಡ್ ಪ್ರಾಧ್ಯಾಪಕರೊಬ್ಬರು ಹೇಳಿದ್ದಾರೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp