ಮಹಾರಾಷ್ಟ್ರ: ಒಂದೇ ದಿನ 7,074 ಹೊಸ ಕೊರೋನಾ ಪ್ರಕರಣ ಪತ್ತೆ; 2 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 7,074 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2 ಲಕ್ಷ ಗಡಿ ದಾಟಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 7,074 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2 ಲಕ್ಷ ಗಡಿ ದಾಟಿದೆ.

ಈ ಬಗ್ಗೆ ಮಹಾರಾಷ್ಟ್ರದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಶನಿವಾರ ಒಂದೇ ದಿನ 7,074 ಕೊರೋನಾ ವೈರಸ್ ಕೇಸ್​ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 2,00,064ಕ್ಕೆ ಏರಿಕೆಯಾಗಿದೆ. ಇನ್ನು ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 295  ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 8,671ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ 3,395 ಮಂದಿ ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,08,082ಕ್ಕೆ ಏರಿಕೆಯಾಗಿದೆ. ಅಂತೆಯೇ ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 83,311ರಷ್ಟಿದೆ. ಮಹಾರಾಷ್ಟ್ರದಲ್ಲಿ 10,80,975 ಕೋವಿಡ್ 
ಟೆಸ್ಟ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಗುಣಮುಖರ ಪ್ರಮಾಣ ಶೇ. 54.02ರಷ್ಟಿದೆ. ಅಂತೆಯೇ ಸಾವಿನ ಪ್ರಮಾಣ ಶೇ.4.33ರಕ್ಕೇರಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com