ತಾಜ್ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆ: ಮುಂಬೈ ಪೊಲೀಸರಿಂದ ಎಫ್ ಐಆರ್ ದಾಖಲು

ವಾಣಿಜ್ಯ ನಗರದಲ್ಲಿನ ಪ್ರಸಿದ್ಧ ತಾಜ್ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ತಾಜ್ ಹೋಟೆಲ್
ತಾಜ್ ಹೋಟೆಲ್

ಮುಂಬೈ: ವಾಣಿಜ್ಯ ನಗರದಲ್ಲಿನ ಪ್ರಸಿದ್ಧ ತಾಜ್ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಕರಾಚಿಯಿಂದ ಕರೆ ಮಾಡುತ್ತಿದ್ದು, ತಾನು ಪಾಕಿಸ್ತಾನದ ಲಷ್ಕರ್ -ಇ- ತೊಯ್ಬಾ ಸಂಘಟನೆಯ ಸದಸ್ಯನೆಂದು ಪರಿಚಯಿಸಿಕೊಂಡಿದ್ದ
ವ್ಯಕ್ತಿ, ಬಾಂದ್ರಾದಲ್ಲಿನ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ ಹಾಗೂ ಕೊಲಾಬಾದಲ್ಲಿನ ತಾಜ್ ಹೋಟೆಲ್ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ. ನಂತರ ಮಂಗಳವಾರ ಹೋಟೆಲ್ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿತ್ತು.

ಐಪಿಸಿ ಸೆಕ್ಷನ್ 506( ಕ್ರಿಮಿನಲ್ ಉದ್ದೇಶ) 505 ( ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಕೊಲಾಬಾ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 2008 ನವೆಂಬರ್ 26 ರಂದು ತಾಜ್ ಹೋಟೆಲ್ ಮೇಲೆ ಪಾಕಿಸ್ತಾನದ ಉಗ್ರರು ದಾಳಿ ನಡೆಸಿ ಮಾರಣ ಹೋಮ ನಡೆಸಿದ್ದರು.

ಸೋಮವಾರ ರಾತ್ರಿ ಪ್ರತ್ಯೇಕವಾಗಿ ಬೆದರಿಕೆ ಕರೆ ಬಂದಿವೆ, ಪ್ರಸ್ತುತ ಟಾಟಾ ಗ್ರೂಫ್ ಪ್ರಾಯೋಜಿತ ಇಂಡಿಯನ್ ಹೋಟೆಲ್ ಕಂಪನಿಯಿಂದ ನಡೆಸಲಾಗುತ್ತಿದ್ದ ಹೋಟೆಲ್ ಗಳು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಾಣಿಜ್ಯ ಚಟುವಟಿಕೆಯನ್ನು ನಿಲ್ಲಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com