ಕಾನ್ಪುರ ಎನ್ ಕೌಂಟರ್: 10 ಪೊಲೀಸ್ ಪೇದೆಗಳ ವರ್ಗಾವಣೆ

ಕಾನ್ಪುರ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಪೊಲೀಸ್ ಪೇದೆಗಳನ್ನು ವರ್ಗಾವಣೆ ಮಾಡಲಾಗಿದೆ.  

Published: 07th July 2020 11:24 AM  |   Last Updated: 07th July 2020 11:24 AM   |  A+A-


Kanpur encounter: 10 constables transferred

ಕಾನ್ಪುರ ಎನ್ ಕೌಂಟರ್: 10 ಪೊಲೀಸ್ ಪೇದೆಗಳ ವರ್ಗಾವಣೆ

Posted By : Srinivas Rao BV
Source : PTI

ಕಾನ್ಪುರ: ಕಾನ್ಪುರ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಪೊಲೀಸ್ ಪೇದೆಗಳನ್ನು ವರ್ಗಾವಣೆ ಮಾಡಲಾಗಿದೆ.  

ಪೊಲೀಸ್ ಲೈನ್ ನಿಂದ ಚೌಬೆಪುರ್ ಪೊಲೀಸ್ ಠಾಣೆಗೆ ಪೇದೆಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಕಾನ್ಪುರದ ಐಜಿ ಮೋಹಿತ್ ಅಗರ್ವಾಲ್ ಹೇಳಿದ್ದಾರೆ. ಚೌಬೆಪುರದ ಪೊಲೀಸ್ ಠಾಣೆಯ ಎಲ್ಲಾ ಸಿಬ್ಬಂದಿಗಳೂ ಸಹ ಕಾನ್ಪುರ ಎನ್ ಕೌಂಟರ್ ನ ಪ್ರಕರಣದಲ್ಲಿ ತನಿಖೆ ಎದುರಿಸಲಿದ್ದಾರೆ ಎಂದು ತಿಳಿಸಿದ್ದಾರೆ. 

ಎನ್ ಕೌಂಟರ್ ಪ್ರಕರಣದಲ್ಲಿ ಹಿಸ್ಟರಿ ಶೀಟರ್ ವಿಕಾಸ್ ದುಬೆ ಹಾಗೂ ಆತನ ಸಹಚರರು ಪೊಲೀಸ್ ಸಿಬ್ಬಂದಿಗಳ ಮೇಲೆ ಗುಂಡು ಹಾರಿಸಿದ್ದ. ಘಟನೆಯಲ್ಲಿ 8 ಪೊಲೀಸರು ಸಾವನ್ನಪ್ಪಿದ್ದರು.  ವಿಕಾಸ್ ದುಬೆಗೆ ಮಾಹಿತಿ ರವಾನಿಸುತ್ತಿದ್ದ ಆರೋಪದಡಿ ಕಳೆದ ವಾರ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿತ್ತು.

ಗ್ಯಾಂಗ್ಸ್ಟರ್ ದುಬೆಯನ್ನು ಬಂಧಿಸಲು ಹೋದಾಗ ರೇಡ್ ವೇಳೆ ಸ್ಥಳದಿಂದ ಓಡಿ ಹೋಗಿದ್ದ ಸ್ಟೇಷನ್ ಹೌಸ್ ಆಫೀಸರ್(ಎಸ್ ಹೆಚ್ಒ) ವಿನಯ್ ತಿವಾರಿಯನ್ನು ಅಮಾನತುಗೊಳಿಸಲಾಗಿತ್ತು.

Stay up to date on all the latest ರಾಷ್ಟ್ರೀಯ news
Poll
Yeddyurappa

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಕರ್ನಾಟಕ ಬಜೆಟ್ 2021 ಕುರಿತು ನಿಮ್ಮ ಅಭಿಪ್ರಾಯ...


Result
ಸಮತೋಲಿತ ಬಜೆಟ್
ಗೊತ್ತುಗುರಿ ಇಲ್ಲದ ಬಜೆಟ್
flipboard facebook twitter whatsapp