24 ಗಂಟೆಗಳಲ್ಲಿ ದೇಶಾದ್ಯಂತ 2,41,430 ಕೋವಿಡ್ ಪರೀಕ್ಷೆ, ಜು.6ರವರೆಗೆ ಒಟ್ಟಾರೆ 1,02,11,092 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,41,430 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,41,430 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,41,430 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.6 ವರೆಗೂ 1,02,11,092 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 22,252 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 7,19,665ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

ಕಳೆದ 24 ಗಂಟೆಗಳಲ್ಲಿ 467 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಇದರೊಂದಿಗೆ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 20,160ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೊರೋನಾ ಸಾವಿನ ಪ್ರಮಾಣ 20 ಸಾವಿರ ಗಡಿ ದಾಟುವುದರೊಂದಿಗೆ ಭಾರತ ಸಾವಿನ ಸಂಖ್ಯೆಯಲ್ಲಿ 8ನೇ ಸ್ಥಾನಕ್ಕೆ ತಲುಪಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com