ಜಮ್ಮು-ಕಾಶ್ಮೀರ: ಪಾಕ್ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಸಾವು, ಮತ್ತೋರ್ವನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಾಲಕೋಟ್ ಹಾಗೂ ಮೆಂಧಾರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಸಾವನ್ನಪ್ಪಿ ಮತ್ತೋರ್ವನಿಗೆ ಗಾಯವಾಗಿರುವ ಘಟನೆ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಾಲಕೋಟ್ ಹಾಗೂ ಮೆಂಧಾರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಸಾವನ್ನಪ್ಪಿ ಮತ್ತೋರ್ವನಿಗೆ ಗಾಯವಾಗಿರುವ ಘಟನೆ ನಡೆದಿದೆ. 

ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸಣ್ಣ ಶಶ್ತ್ರಾಸ್ತ್ರಗಳು ಹಾಗೂ ಶೆಲ್, ಮಾರ್ಟರ್ಸ್ ಗಳ ಮೂಲಕ ದಾಳಿ ನಡೆಸಿದ್ದಾರೆ. 

ಪರಿಣಾಮ ಓರ್ವ ನಾಗರೀಕ ಸಾವನ್ನಪ್ಪಿ, ಮತ್ತೋರ್ವ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಪಾಕಿಸ್ತಾನ ಸೇನೆ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದ್ದು, 2.45 ಸುಮಾರಿಗೆ ಗುಂಡಿನ ಮೊರೆತ ಅಂತ್ಯಗೊಂಡಿದ್ದು ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com