ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಬಿಜೆಪಿ ನಾಯಕ ಶೇಖ್ ವಾಸಿಮ್ ಹತ್ಯೆ, ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ

ಜಮ್ಮು-ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ಬಿಜೆಪಿ ನಾಯಕ ಶೇಖ್ ವಾಸಿಮ್, ಅವರ ತಂದೆ ಮತ್ತು ಸೋದರನನ್ನು ಉಗ್ರರು ಹತ್ಯೆಗೈದಿದ್ದಾರೆ.
ಹತ್ಯೆಗೀಡಾದ ಬಿಜೆಪಿ ನಾಯಕ ಶೇಖ್ ವಾಸಿಮ್
ಹತ್ಯೆಗೀಡಾದ ಬಿಜೆಪಿ ನಾಯಕ ಶೇಖ್ ವಾಸಿಮ್

ನವದೆಹಲಿ: ಜಮ್ಮು-ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ಬಿಜೆಪಿ ನಾಯಕ ಶೇಖ್ ವಾಸಿಮ್, ಅವರ ತಂದೆ ಮತ್ತು ಸೋದರನನ್ನು ಉಗ್ರರು ಹತ್ಯೆಗೈದಿದ್ದಾರೆ.

ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಪೊಲೀಸ್ ಠಾಣೆ ಹತ್ತಿರ ಅಂಗಡಿಯ ಹೊರಗೆ ಶೇಖ್ ವಾಸಿಮ್ ತಮ್ಮ ತಂದೆ ಮತ್ತು ಸೋದರನ ಜೊತೆಗೆ ಕುಳಿತಿದ್ದ ವೇಳೆ ಉಗ್ರರು ಏಕಾಏಕಿ ದಾಳಿ ನಡೆಸಿದರು ಎಂದು ಜಮ್ಮು-ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಬಂಡಿಪೊರಾ ಜಿಲ್ಲೆಯ ಬರಿ ಎಂಬಲ್ಲಿ ಬಿಜೆಪಿ ನಾಯಕ ಶೇಖ್ ವಾಸಿಮ್, ಅವರ ತಂದೆ ಬಶೀರ್ ಅಹ್ಮದ್, ಸೋದರ ಉಮರ್ ಬಶೀರ್ ಮೇಲೆ ಉಗ್ರರು ಏಕಾಏಕಿ ಗುಂಡಿನ ಮಳೆಗೈದರು. ತೀವ್ರ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಈ ಘಟನೆ ಬಗ್ಗೆ ನಿನ್ನೆ ತಡರಾತ್ರಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.ಮೃತ ಶೇಖ್ ವಾಸಿಮ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

ಈ ದಾಳಿ ಬಿಜೆಪಿ ನಾಯಕನ ಸಾವು ಕಣಿವೆ ಪ್ರದೇಶದಲ್ಲಿ ಭದ್ರತಾ ಕೊರತೆಯನ್ನು ಎತ್ತಿ ತೋರಿಸುತ್ತದೆ. ಸೂಕ್ಷ್ಮ ಪ್ರದೇಶವಾಗಿರುವುದರಿಂದ ಶೇಖ್ ವಾಸಿಮ್ ಗೆ 8 ಮಂದಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು. ಆದರೆ ನಿನ್ನೆ ಭಯೋತ್ಪಾದಕರು ದಾಳಿ ಮಾಡಿದ್ದ ಸಂದರ್ಭದಲ್ಲಿ ಒಬ್ಬರೂ ಕೂಡ ಅವರ ಜೊತೆ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಭದ್ರತಾ ಪಡೆ ಸಿಬ್ಬಂದಿಗಳನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ರಿವಾಲ್ವರ್ ನೊಂದಿಗೆ ಬೈಕ್ ನಲ್ಲಿ ಬಂದು ಉಗ್ರರು ದಾಳಿ ಮಾಡಿದ್ದಾರೆ. ಪೊಲೀಸ್ ಠಾಣೆಯ ಕೇವಲ 10 ಮೀಟರ್ ದೂರದಲ್ಲಿ ಈ ದಾಳಿ ನಡೆದಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com